Advertisement

ಬಿಜೆಪಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಖಚಿತ: ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ

09:04 AM Feb 22, 2022 | Team Udayavani |

ಬೆಂಗಳೂರು: ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿಯು 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ. ಉತ್ತರದ ಖಾನಾಪುರ ಮತ್ತು ದಕ್ಷಿಣದ ರಾಮನಗರದಲ್ಲಿ ಜನತೆಯೂ ಬಿಜೆಪಿ ಅಧಿಕಾರ ಪಡೆಯಲು ನೆರವಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ರಾಮನಗರ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆ ಖಾನಾಪುರದ ಪ್ರಮುಖ ಮುಖಂಡರು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಪ್ರಾರಂಭಗೊಂಡಿದೆ. ಬಿಜೆಪಿ ಆಳವಾಗಿ ಬೇರೂರಿ ಶಕ್ತಿ ಪಡೆದಿರದ ಪ್ರದೇಶಗಳಲ್ಲಿ ಪಕ್ಷವು ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಯಲಿದೆ ಎಂದರು.

ಇದನ್ನೂ ಓದಿ:ಮಂಗಳೂರು, ಉಡುಪಿಯಲ್ಲಿ ಮುನ್ನೆಚ್ಚರಿಕೆ ಕ್ರಮ; ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ

ರಾಜ್ಯದ ರಾಜಕೀಯದಲ್ಲಿ ಇಂದು ಅತ್ಯಂತ ಮಹತ್ವದ ದಿನ. ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನೆಲೆಯಾಗಿದ್ದ ಜಿಲ್ಲೆಗಳಲ್ಲಿ ಇಂದು ದೊಡ್ಡ ಬದಲಾವಣೆಯಾಗುತ್ತಿದೆ. ಬರುವಂತಹ ದಿನಗಳಲ್ಲಿ ಎಲ್ಲ ಕಡೆ ಬಿಜೆಪಿಯ ಕಮಲ ಅರಳಲಿದೆ. ಬಿಜೆಪಿ ಪರವಾದ ಈ ಅಲೆಯು ದೊಡ್ಡ ಶಕ್ತಿಯಾಗಿ ಪರಿವರ್ತನೆಗೊಳ್ಳಲಿದೆ ಎಂದು ಅವರು ತಿಳಿಸಿದರು.

ಇದೊಂದು ಹೊಸ ದಿಕ್ಸೂಚಿ. ಈಗ ಪಕ್ಷ ಸೇರಿದ ಅರವಿಂದ ಪಾಟೀಲ್, ಲಿಂಗೇಶ್ ಕುಮಾರ್ ಮತ್ತಿತರರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಿಗಳು. ಹೀಗಾಗಿ ಪಕ್ಷ ಹೆಚ್ಚು ಬಲಯುತವಾಗಿ ಬೆಳೆಯಲಿದೆ. ಬಿಜೆಪಿ ಸಕಾರಾತ್ಮಕ ರಾಜಕೀಯ ಮಾಡುತ್ತದೆ. ಆಡಳಿತಕ್ಕೆ ಬಂದ ಬಳಿಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಜನರಿಗಾಗಿ ಮೈಮುರಿದು ದುಡಿಯುತ್ತಿದ್ದೇವೆ. ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯಾದ್ಯಂತ ದೃಢವಾಗಿ ಬೆಳೆದಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next