Advertisement
ತಾಲೂಕಿನ ಕಲ್ಲೋಳ್ಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳ್ಳಿ, ಅರಭಾವಿ ಪಟ್ಟಣಗಳ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಅಳೆದು- ತೂಗಿ ಎಲ್ಲ ಸಮುದಾಯಗಳ ಗೆಲ್ಲುವ ವ್ಯಕ್ತಿಗಳಿಗೆ ಮಣೆ ಹಾಕಿ ಸಮತೋಲನದಿಂದ ಪಕ್ಷದ ವರಿಷ್ಟರು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
Related Articles
Advertisement
ನಮ್ಮ ವಿರುದ್ಧ ಯಾರೇ ಅಭ್ಯರ್ಥಿ ಆಗಲಿ. ಅವರನ್ನು ಹಗುರವಾಗಿ ನೋಡಬೇಡಿ. ಸಮರ್ಥವಾಗಿ ಎದರಿಸೋಣ. ಅಭಿವೃದ್ಧಿ ಒಂದೇ ನಮ್ಮ ಮೂಲ ಮಂತ್ರವಾಗಿರಲಿ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ನಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ನಮ್ಮ ಗೆಲುವಿಗೆ ಸಹಕಾರಿಯಾಗಲಿವೆ. ನಮ್ಮ ಜನೋಪಕಾರಿ ಕೆಲಸಗಳು ನಮ್ಮನ್ನು ಕೈ ಹಿಡಿಯಲಿವೆ. ಜನರ ಆಶೀರ್ವಾದದಿಂದ ಈ ಬಾರಿಯೂ 6 ನೇ ಸಲ ವಿಧಾನಸಭೆಗೆ ಪ್ರವೇಶ ಪಡೆಯುವುದಾಗಿ ಹೇಳಿದರು.
ಮುಹೂರ್ತ ನೋಡಿಕೊಂಡು ನಾಮ ಪತ್ರ ಸಲ್ಲಿಸುತ್ತೇನೆ. ಮೊದಲು ಕೇವಲ ಐದು ಜನರನ್ನು ಕರೆದುಕೊಂಡು ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ. ಇನ್ನೊಂದು ಸಲ ಕ್ಷೇತ್ರದ ಕಾರ್ಯಕರ್ತರನ್ನು ಸೇರಿಸಿಕೊಂಡು ಚುನಾವಣಾಧಿಕಾರಿಗಳಿಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸುವುದಾಗಿ ಅವರು ತಿಳಿಸಿದರು.
ರಾಜ್ಯದಲ್ಲಿ ನಮ್ಮ ಪಕ್ಷ ಮತ್ತೊಂದು ಸಲ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ನಾವು ಮಾಡಿರುವ ಜನಪ್ರಿಯ ಕೆಲಸಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಪ್ರತಿ ಬೂತ್ ಮಟ್ಟದಿಂದ ನಮಗೆ ಮತ ಬೀಳಲು ಶ್ರಮಿಸಬೇಕು. ಕಾರ್ಯಕರ್ತರು ಈ ದಿಸೆಯಲ್ಲಿ ಮನಸು ಕೊಟ್ಟು ಕೆಲಸ ಮಾಡುವಂತೆ ಅವರು ಹೇಳಿದರು.
ಅಧ್ಯಕ್ಷತೆಯನ್ನು ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹಾಗೂ ಬಸವರಾಜ ಮಾಳೇದವರ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಈ ಬಾರಿಯೂ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಿ ಆಯ್ಕೆ ಮಾಡಲು ನಾವೆಲ್ಲರೂ ಶ್ರಮಿಸೋಣ. ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಲು ಅವಕಾಶ ನೀಡಲು ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲೆಯ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಬೇಕು. ನಾವು ಅರಭಾವಿ ಕ್ಷೇತ್ರದಲ್ಲಿ ನಿಮ್ಮ ಪರವಾಗಿ ಪ್ರಚಾರ ಕಾರ್ಯ ಮಾಡಿ ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಅಭಯ ನೀಡಿದರು.
ಪ್ರಭಾ ಶುಗರ್ ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚಗೌಡ ಪಾಟೀಲ, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಶಂಕರ್ ಬಿಲಕುಂದಿ, ಚಂದ್ರು ಬೆಳಗಲಿ, ಬಿ.ಬಿ.ದಾಸನವರ, ಸುಭಾಸ ಕುರಬೇಟ, ಲಾಲಸಾಬ ಸಿದ್ಧಾಪೂರ, ರಮೇಶ ಸಣ್ಣಕ್ಕಿ, ವಿಠ್ಠಲ ಪಾಟೀಲ, ಜಯಾನಂದ ಪಾಟೀಲ, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪರಸಪ್ಪ ಬಬಲಿ ಕಾರ್ಯಕ್ರಮ ನಿರೂಪಿಸಿದರು.