ಅಹಮದಾಬಾದ್: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು, ಮತ್ತೊಮ್ಮೆ ಭಾರೀ ಬಹುಮತದಿಂದ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ (ನವೆಂಬರ್ 15) ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:“ನನ್ನ ಚಹಾದಂಗಡಿಯನ್ನು ಮುಚ್ಚುತ್ತೇನೆ…ಕಣ್ಣೀರಿಟ್ಟ ʼಗ್ರ್ಯಾಜುವೇಟ್ ಚಾಯಿವಾಲಿʼ
ಸನಂದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾನುಭಾಯಿ ಪಟೇಲ್ ಅವರು ನಾಮಪತ್ರ ಸಲ್ಲಿಸಲು ತೆರಳಿದ್ದ ವೇಳೆ ಅಮಿತ್ ಶಾ ಕೂಡಾ ಅವರ ಜತೆಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ಗುಜರಾತ್ ನಲ್ಲಿ ಬಿಜೆಪಿ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಮತ್ತೊಮ್ಮೆ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಸಿಎಂ ಪಟೇಲ್ ಅವರು ಆರ್ಥಿಕ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದಾಗಿ ಶಾ ಹೇಳಿದರು.
Related Articles
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಅಭಿವೃದ್ಧಿ ಮಾದರಿಯನ್ನು ಭೂಪೇಂದ್ರ ಪಟೇಲ್ ಅನುಸರಿಸಿದ್ದಾರೆ. ರಾಜ್ಯದಲ್ಲಿನ ದಲಿತರು, ಬುಡಕಟ್ಟು ಜನಾಂಗ ಹಾಗೂ ಇತರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಒತ್ತು ನೀಡಿರುವುದಾಗಿ ಶಾ ತಿಳಿಸಿದ್ದಾರೆ.