Advertisement

ಮುಂಬಯಿ ಸ್ಥಳೀಯ ಸಂಸ್ಥೆ ಚುನಾವಣೆ : ಬಿಜೆಪಿ ಏಕಾಂಗಿ ಸ್ಪರ್ಧೆ

09:53 AM Dec 09, 2019 | Team Udayavani |

ಮುಂಬಯಿ: 2022ರಲ್ಲಿ ನಡೆಯಲಿರುವ ಮುಂಬಯಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ. ಶಿವಸೇನೆಯು ಬಿಜೆಪಿಯೊಂದಿಗಿನ ಮೈತ್ರಿಗೆ ಕೊನೆಹಾಡಿ ಎನ್‌ಸಿಪಿ- ಕಾಂಗ್ರೆಸ್‌ ಜತೆ ಕೈಜೋಡಿಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.

Advertisement

ದೇಶದ ಅತಿ ಶ್ರೀಮಂತ ಸ್ಥಳೀಯ ಸಂಸ್ಥೆ ಎಂದು ಕರೆಯಲ್ಪಡುವ ಬೃಹನ್ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯನ್ನು 30 ವರ್ಷಗಳಿಂದಲೂ ಶಿವಸೇನೆಯೇ ನಿಯಂತ್ರಿಸುತ್ತಿದೆ. ಮುಂದಿನ ಬಿಎಂಸಿ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಿ, ಅಧಿಕಾರಕ್ಕೆ ಬರಲು ಬಿಜೆಪಿ ನಿರ್ಧರಿಸಿದೆ. ಖಂಡಿತಾ ಮುಂದಿನ ಮೇಯರ್‌ ಬಿಜೆಪಿಯವರೇ ಆಗಿರುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next