Advertisement

Karnataka ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಲಿದೆ: ಬಿ.ವೈ.ವಿಜಯೇಂದ್ರ

12:13 AM Mar 10, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

Advertisement

ನಗರದ ಮಲ್ಲೇಶ್ವರದ ಬಾವುರಾವ್‌ ದೇಶಪಾಂಡೆ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇವತ್ತು, ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ರಾಜ್ಯಾಧ್ಯಕ್ಷನಾಗಿ ವಿಶ್ವಾಸ ಹೊಂದಿದ್ದೇನೆ. ಹಿಂದೆ ಬಾರದಂಥ ಅತ್ಯುತ್ತಮ ಫ‌ಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದದರು.

ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲ ವಿವರ ಲಭಿಸಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಬೆಂಗಳೂರಿನ ಜಲಕ್ಷಾಮದ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡವಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು, ಬೆಂಗಳೂರಿನಲ್ಲಿ 15- 20 ದಿನಗಳಿಂದ ನೀರಿನ ತೀವ್ರ ಸಮಸ್ಯೆ ಇದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 14ಕ್ಕೂ ಹೆಚ್ಚು ನೋಡಲ್‌ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅದರ ಅರ್ಥ ಏನು ? ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ ಎಂದು ಕೇಳಿದರು.

ಹೇಳಲು ಸಾಧ್ಯವಿಲ್ಲ
ಕೆಲವು ಸಂಸದರಿಗೆ ಟಿಕೆಟ್‌ ನೀಡದಂತೆ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಭೆಯಲ್ಲಿ ನಡೆದ ಚರ್ಚೆಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

Advertisement

ಸಂಸದರ ಕಾರ್ಯ ವೈಖರಿಯನ್ನು ನೋಡಿ ಟಿಕೆಟ್‌ ನೀಡುತ್ತಾರೆ. ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಯದುವೀರ್‌ ಬರುತ್ತಾರೆಯೇ ಎಂಬುದು ನನಗೆ ಗೊತ್ತಿಲ್ಲ.
-ಆರ್‌.ಅಶೋಕ, ವಿಪಕ್ಷ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next