ಶಿಕಾರಿಪುರ: ರಾಜ್ಯದಲ್ಲಿ ಬಿಜೆಪಿ 125 ಸ್ಥಾನ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಆಡಳಿತ ಸೌಧ ಕಟ್ಟಡದ 134ನೇ ಮತಗಟ್ಟೆ ಕೇಂದ್ರಕ್ಕೆ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ರಾಜ್ಯ ಸುತ್ತಿ ಬಂದಿದ್ದೇನೆ, ಜನತೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದರು.
ಇದನ್ನೂ ಓದಿ:ವೃದ್ಧರಿಗೆ ಸಹಾಯದ ನೆಪದಲ್ಲಿ ಬಿಜೆಪಿಯ ಬಟನ್ ಹೊತ್ತಿಸಿದ ಸಿಬ್ಬಂದಿ: ಪ್ರಿಯಾಂಕ್ ಖರ್ಗೆ ತರಾಟೆ
Related Articles
ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಸರ್ಕಾರ ರಚನೆ ಮಾಡುವುದು ಅಷ್ಟೇ ಸತ್ಯ. ಶಿಕಾರಿಪುರದಲ್ಲಿ ವಿಜಯೇಂದ್ರ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ, ರಾಘವೇಂದ್ರ ಪತ್ನಿ ತೇಜಸ್ವಿನಿ, ವಿಜಯೇಂದ್ರ ಪತ್ನಿ ಪ್ರೇಮಾ ಉಪಸ್ಥಿತರಿದ್ದರು