Advertisement
ಒಟ್ಟು ಸಮೀಕ್ಷೆಗಳು ನಾಗಾಲ್ಯಾಂಡ್‌ನಲ್ಲಿ ಮಿತ್ರಪಕ್ಷವಾದ ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ) ಯೊಂದಿಗೆ ಬಿಜೆಪಿಯ ಮೈತ್ರಿ ಸರಕಾರವು ಅಧಿಕಾರಕ್ಕೆ ಬರಲಿದೆ ಮತ್ತು ಮೇಘಾಲಯದಲ್ಲಿ ಎರಡರಿಂದ ಕನಿಷ್ಠ ಏಳು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ತೋರಿಸಿದೆ.
Related Articles
Advertisement
ಗ್ರೇಟರ್ ಟಿಪ್ರಾಲ್ಯಾಂಡ್‌ನ ಪ್ರಮುಖ ಬೇಡಿಕೆಯೊಂದಿಗೆ ಹಿಂದಿನ ರಾಜಮನೆತನದ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಅವರು ಹುಟ್ಟುಹಾಕಿದ ಹೊಸ ಪಕ್ಷವಾದ ತಿಪ್ರಾ ಮೋಥಾ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ಹೇಳಿವೆ. ಕಳೆದ ಬಾರಿ, ತ್ರಿಪುರಾದಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಆದರೂ ಪ್ರಾದೇಶಿಕ IPFT (ತ್ರಿಪುರಾದ ಸ್ಥಳೀಯ ಪ್ರಗತಿಶೀಲ ಫ್ರಂಟ್) ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.
ಮೇಘಾಲಯದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯಾಗಲಿದ್ದು, ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ) 23 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ. 2018 ರಲ್ಲಿ ರಾಜ್ಯದಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದ ಬಿಜೆಪಿ, ಏಳು ಸ್ಥಾನಗಳೊಂದಿಗೆ ತನ್ನ ಸಂಖ್ಯೆಯನ್ನು ಸ್ವಲ್ಪಮಟ್ಟಿಗೆ ವಿಸ್ತರಿಸಲಿದೆ. ಕಾಂಗ್ರೆಸ್ ಆರು ಸ್ಥಾನಗಳನ್ನು ಗೆಲ್ಲಬಹುದು ಮತ್ತು ಹೊಸದಾಗಿ ಪ್ರವೇಶಿಸಿದ ತೃಣಮೂಲ ಕಾಂಗ್ರೆಸ್ 11 ಸ್ಥಾನಗಳೊಂದಿಗೆ ತನ್ನ ಖಾತೆಯನ್ನು ತೆರೆಯುತ್ತದೆ ಎಂದು ಸಮೀಕ್ಷೆಯೊಂದು ಹೇಳಿದೆ.
2018 ರಲ್ಲಿ, ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತು, ಆದರೆ ಎನ್‌ಪಿಪಿಯೊಂದಿಗೆ ಸರಕಾರವನ್ನು ರಚಿಸುವಲ್ಲಿ ಯಶಸ್ವಿಯಾಗಿತ್ತು. ಭ್ರಷ್ಟಾಚಾರದ ಆರೋಪದ ಮೇಲೆ ಸಂಗ್ಮಾ ಅವರ ಪಕ್ಷದೊಂದಿಗೆ ಭಿನ್ನಾಭಿಪ್ರಾಯದ ನಂತರ ಈ ಬಾರಿ ಅದು 60 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸಂಗ್ಮಾ ಅವರ ಪಕ್ಷದೊಂದಿಗಿನ ಮೈತ್ರಿಯನ್ನು ಪುನರುಜ್ಜೀವನಗೊಳಿಸಲು ಬಿಜೆಪಿ ವಿಫಲವಾದರೆ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಕಿಂಗ್ ಮೇಕರ್ ಆಗಬಹುದು ಎನ್ನಲಾಗಿದೆ.
ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟವು 42 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಎನ್‌ಪಿಎಫ್ ಆರು ಮತ್ತು ಕಾಂಗ್ರೆಸ್ ಒಂದನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ಹೇಳಿವೆ. ಮೂರು ರಾಜ್ಯಗಳಲ್ಲಿ ಬಹುಮತಕ್ಕೆ 31 ಸ್ಥಾನಗಳು ಅಗತ್ಯವಾಗಿದೆ.