ಮೈಸೂರು: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ತಿಪ್ಪರಲಾಗ ಹಾಕಿದರು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ವರುಣಾ ಕ್ಷೇತ್ರದಲ್ಲಿನ ಪಕ್ಷದ ಗ್ರಾ.ಪಂ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಗ್ರಾ.ಪಂ ಚುನಾವಣೆಯಲ್ಲಿ ಗೆದ್ದಿದ್ದಾರೆ. ರಾಜ್ಯದಲ್ಲಿ ನಾವು ನಂಬರ್ ಒನ್, ಬಿಜೆಪಿ ಎರಡನೇ ಸ್ಥಾನ ಹಾಗೂ ಜೆಡಿಎಸ್ ಮೂರನೇ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಜನರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ ಎಂದರು.
ಇಡೀ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮೊದಲ ಸ್ಥಾನ. ಜೆಡಿಎಸ್ ಎರಡನೇ ಸ್ಥಾನ, ಬಿಜೆಪಿ ಮೂರನೇ ಸ್ಥಾನದಲ್ಲಿವೆ. ಇದು ಏನು ಸೂಚಿಸುತ್ತೆ ಅಂದರೆ ಮುಂದೆ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಮುಂದಿನ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಇದನ್ನೂ ಓದಿ:ಬಿಎಸ್ ವೈ ಸಂಪುಟಕ್ಕೆ ‘ಸಪ್ತ ಸಚಿವರ ಬಲ’: ನೂತನ ಸಚಿವರ ಪ್ರಮಾಣ ವಚನ
ನಮ್ಮ ಎಂಎಲ್‌ಎಗಳನ್ನು ಖರೀದಿ ಮಾಡಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ನಮ್ಮವರು 14 ಜನ, ಜೆಡಿಎಸ್‌ನವರು 3 ಹೋಗಿದ್ದರು. ಸಿದ್ದರಾಮಯ್ಯ ಆಪ್ತರು ಕೈ ಕೊಟ್ಟು ಹೋದರು ಎಂದು ಕುಮಾರಸ್ವಾಮಿ ಹೇಳುತ್ತಾರೆ. ನಿಮ್ಮ ಪಕ್ಷದ ಮೂವರು ಶಾಸಕರು ಹೋದರಲ್ಲ ಅವರು ಏನಾಗಬೇಕು ನಿಮಗೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ ಹಾಕಿದರು.