Advertisement
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ ಮೂರ್ತಿ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಉತ್ತರ ನೀಡಬೇಕು. ಘಟನೆಯಲ್ಲಿ ಸಂಪತ್ ರಾಜ್ ವಿರುದ್ಧ ಅಖಂಡ ಶ್ರೀನಿವಾಸ ಮೂರ್ತಿ ಅವರೇ ದೂರು ನೀಡಿದ್ದಾರೆ. ಆದರೆ ಈಗ ಸಂಪತ್ ರಾಜ್ ನಾಪತ್ತೆಯಾಗಿದ್ದಾರೆ. ಆದರೆ ಅವರು ನಾಪತ್ತೆಯಾಗಿಲ್ಲ, ಮನೆಯಲ್ಲಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಡಿ ಕೆ ಶಿವಕುಮಾರ್ ಅವರಿಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಗೆ ಶರಣಾಗಲು ಹೇಳಬೇಕಿತ್ತು ಎಂದು ಹೇಳಿದರು.
Related Articles
Advertisement
ಉಪಚುನಾವಣೆಯ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಶಿರಾ ಮತ್ತು ಆರ್.ಆರ್. ನಗರದಲ್ಲಿ ನಾವು ವ್ಯವಸ್ಥಿತ ರೀತಿಯಲ್ಲಿ ಚುನಾವಣೆ ಎದುರಿಸಿದ್ದೇವೆ. ಆದರೆ ಕಾಂಗ್ರೆಸ್ ನಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವೈಯಕ್ತಿತ ಪ್ರತಿಷ್ಟೆಯಿಂದ ಸೋಲುವಂತೆ ಮಾಡಿದ್ದರು. ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಸೋಲುಬೇಕೆಂದು ಸಿದ್ದರಾಮಯ್ಯ, ಶಿರಾದಲ್ಲಿ ಸೋಲಬೇಕೆಂದು ಡಿಕೆ ಶಿವಕುಮಾರ್ ಬಯಸಿದ್ದರು ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ನಾಯಕನ ಸೀಟ್ ಗೆ ಟವೆಲ್ ಹಾಕಲು ಈಗಾಗಲೇ ಆರಂಭವಾಗಿದೆ. ಕಾಂಗ್ರೆಸ್ ನಲ್ಲಿ ಒಳ ರಾಜಕಾರಣ ಮಾಡಿದ್ದೇ ಅವರ ಸೋಲಿಗೆ ಕಾರಣ ಎಂದು ನಳಿನ್ ಅಭಿಪ್ರಾಯಪಟ್ಟರು.
ಸಂಪುಟ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ ಎಂದರು.