Advertisement

BJP; ಮುಂದಿನ ತೀರ್ಮಾನ ಕೈಗೊಳ್ಳುತ್ತನೆ; ಶಿವಮೊಗ್ಗದಿಂದ ಈಶ್ವರಪ್ಪ ಬಂಡಾಯ?

09:35 PM Mar 13, 2024 | Team Udayavani |

ಶಿವಮೊಗ್ಗ: ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ ಸಿಎಂ ಕೆ.ಎಸ್. ಈಶ್ವರಪ್ಪ ಅವರು ಭಾರೀ ಆಕ್ರೋಶ ಹೊರ ಹಾಕಿ ಬೆಂಬಲಿಗರ ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ”ಯಡಿಯೂರಪ್ಪ ಅವರು ನನಗೆ ಮೋಸ ಮಾಡಿದ್ದಾರೆ. ಕಾಂತೇಶ್ ಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಮಾರ್ಚ್ 15 ರಂದು ಸಂಜೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನಾನು 40 ವರ್ಷ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಅದನ್ನು ಗುರುತಿಸಿ ನನ್ನ ಮಗನಿಗೆ ಟಿಕೆಟ್ ಕೊಡಬಹುದಿತ್ತು. ಸದಾನಂದ ಗೌಡ, ಸಿ.ಟಿ.ರವಿ, ಪ್ರತಾಪ್ ಸಿಂಹ ಅವರಿಗೆ ಅನ್ಯಾಯವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಟಿಕೆಟ್ ಪ್ರಕಟವಾಗುತ್ತಿದ್ದಂತೆ ಹಾವೇರಿ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸಿದ್ದ ಕೆ.ಈ.ಕಾಂತೇಶ್ ಇತರ ಬೆಂಬಲಿಗರೊಂದಿಗೆ ಈಶ್ವರಪ್ಪ ಅವರು ಕಾರಿನಲ್ಲಿ ಹೊರಟರು. ಫೋನ್ ಕರೆಯೊಂದು ಬರುತ್ತಿದ್ದಂತೆ ತುರ್ತಾಗಿ ಈಶ್ವರಪ್ಪ ಮತ್ತು ಕಾಂತೇಶ್ ಅವರು ತೆರಳಿದರು. ಅವರ ಮುಖದಲ್ಲಿ ತೀವ್ರ ಬೇಸರ, ಆಕ್ರೋಶ ಮನೆ ಮಾಡಿತ್ತು. ಮನೆಯಿಂದ ಹೊರಡುತ್ತಿದ್ದಂತೆ, ಮಾಧ್ಯಮದವರನ್ನು ಹೊರಗೆ ಹೋಗಿ ಎಂದ ಕುಟುಂಬ ಸದಸ್ಯರು ಕೇಳಿಕೊಂಡಿದ್ದಾರೆ. ಕಾಂತೇಶ್ ಪತ್ನಿ ಸೇರಿ ಈಶ್ವರಪ್ಪ ಕುಟುಂಬ ಕಣ್ಣೀರು ಹಾಕುತ್ತಿರುವ ದೃಶ್ಯವೂ ಕಂಡು ಬಂತು.

ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವ ಕ್ಷೇತ್ರದ ಹಾಲಿ ಶಾಸಕರಾಗಿದ್ದರೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕಾಂತೇಶ್ ಅವರು ಟಿಕೆಟ್ ಗಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೂಲಕವೂ ಒತ್ತಡ ಹೇರಿದ್ದರು. ಟಿಕೆಟ್ ಕೊಡಿಸುವ ಪ್ರಯತ್ನ ಮಾಡುವುದಾಗಿಯೂ ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ನೀಡಿದ್ದರು.

Advertisement

ಇನ್ನೊಂದೆಡೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರೂ ಹಾವೇರಿ ಕ್ಷೇತ್ರದ ಟಿಕೆಟ್ ಗಾಗಿ ಲಾಭಿ ನಡೆಸಿದ್ದರು. ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಕಣದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ ಬಳಿಕ, ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಕಾಂತೇಶ್ ಅವರು ಹಾವೇರಿ ಕ್ಷೇತ್ರದ ಮೇಲೆ ಕಣ್ಣಿಟ್ಟು ಚುನಾವಣೆ ಸಿದ್ಧತೆಯನ್ನೂ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next