Advertisement

ಗೋವಾದಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಮತ್ತೆ ಗೆಲುವು ಸಾಧಿಸಲಿದೆ: ಅಮಿತ್ ಶಾ

08:00 PM Oct 14, 2021 | Team Udayavani |

ಪಣಜಿ: ಮುಂದಿನ ವರ್ಷ ಫೆಬ್ರುವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ(ಅಕ್ಟೋಬರ್ 14) ವಿಶ್ವಾಸವ್ಯಕ್ತಪಡಿಸಿದ್ದಾರೆ.

Advertisement

ಗೋವಾದಲ್ಲಿ ಮತ್ತೆ ಭಾರತೀಯ ಜನತಾ ಪಕ್ಷ ಸರ್ಕಾರ ಅಧಿಕಾರಕ್ಕೇಲಿದೆ. ಚುನಾವಣೆಗೆ ಇನ್ನೂ ಸಮಯವಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಗೋವಾದ ಜನತೆ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳುವುದಾಗಿ ಶಾ ಹೇಳಿದರು.

ಡಬ್ಬಲ್ ಎಂಜಿನ್ ಸರ್ಕಾರದಿಂದ ಗೋವಾದಲ್ಲಿ ಅಭಿವೃದ್ಧಿ ಕಾರ್ಯ ಮುಂದುವರಿಯಲು ಸಹಾಯವಾಗಲಿದೆ ಎಂದು ಶಾ ಈ ಸಂದರ್ಭದಲ್ಲಿ ತಿಳಿಸಿದರು. ಅವರು ಇಂದು ಗೋವಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಯೂನಿರ್ವಸಿಟಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕೋವಿಡ್ ಮೊದಲ ಹಂತದ ಲಸಿಕೆಯನ್ನು ನೀಡುವಲ್ಲಿ ಪ್ರಮೋದ್ ಸಾವಂತ್ ನೇತೃತ್ವದ ಗೋವಾ ಸರ್ಕಾರ ಯಶಸ್ವಿಯಾಗಿದೆ ಎಂದು ಅಮಿತ್ ಶಾ ಶ್ಲಾಘಿಸಿದರು. ಅಷ್ಟೇ ಅಲ್ಲ ಎರಡನೇ ಹಂತದ ಕೋವಿಡ್ ಲಸಿಕೆ ಡೋಸ್ ಅಭಿಯಾನದ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾ ಮನವಿ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next