Advertisement

ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ: ಸಚಿವ ಜಗದೀಶ ಶೆಟ್ಟರ್

04:59 PM Oct 18, 2020 | keerthan |

ಹಾವೇರಿ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

Advertisement

ಹಾವೇರಿಯಲ್ಲಿ ಮಾತನಾಡಿದ ಅವರು, ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಅಲೆ ಕಂಡು ಬರುತ್ತಿದ್ದು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವುದು ಅಭಿವೃದ್ಧಿಗೆ ಪೂರಕವಾಗುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು ಈ ಮೂಲಕ ಪಕ್ಷಕ್ಕೆ ಇನ್ನು ಹೆಚ್ಚಿನ ಶಕ್ತಿ ದೊರಕುವ ವಿಶ್ವಾಸವಿದೆ ಎಂದರು.

ಪಶ್ಚಿಮ‌ ಪದವೀಧರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಎಸ್.ವಿ. ಸಂಕನೂರ ಕಳೆದ ಆರು ವರ್ಷಗಳಿಂದ ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಅವರು 25 ಸಾವಿರಕ್ಕೂ ಹೆಚ್ಚು ಮತಗಳ‌ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next