Advertisement

ಕರ್ನಾಟಕದಲ್ಲೂ ಬಿಜೆಪಿ ಗೆಲ್ಲಲಿದೆ: ಸಿಎಂ ಫಡ್ನವೀಸ್‌

06:55 AM Mar 05, 2018 | |

ಮುಂಬಯಿ: ಇತ್ತೀಚೆಗೆ ನಡೆದ ಮೂರು ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಪ್ರದರ್ಶನವನ್ನು ಶ್ಲಾಘಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಕರ್ನಾಟಕದಲ್ಲೂ ಪಕ್ಷವು ಇದೇ ರೀತಿಯಲ್ಲಿ ವಿಜಯ ಪತಾಕೆಯನ್ನು ಹಾರಿಸಲಿದೆ ಎಂದು ಪ್ರತಿಪಾದಿಸಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿಪುರಾ, ನಾಗಾಲ್ಯಾಂಡ್‌ ಮತ್ತು ಮೇಘಾಲಯದಲ್ಲಿ ಬಿಜೆಪಿಯು ಒಟ್ಟು ಮತದಾನದ ಅರ್ಧದಷ್ಟು ಮತಗಳನ್ನು ಪಡೆದುಕೊಂಡಿದ್ದು, ಇದು ಕೇಸರಿ ಪಕ್ಷದ ಪರ ಮತದಾರರ ಒಲವು ಹೆಚ್ಚಾಗುತ್ತಿರುವುದನ್ನು ತೋರಿಸುತ್ತದೆ. ಈ ಚುನಾವಣಾ ಫಲಿತಾಂಶವು ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಒಂದು ಉತ್ತೇಜನವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next