ಕನಕಪುರ: ಹಿಮಾಚಲ ಪ್ರದೇಶ ಹಾಗೂ ಗುಜರಾತ್ ರಾಜ್ಯಗಳ ಬಿಜೆಪಿ ಗೆಲುವು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಟಿ.ವಿ.ರಾಜು ಹೇಳಿದರು. ಸಾತನೂರಿನಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸಿ ಮಾತನಾಡಿದರು.
ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಚುನಾವಣೆಗೆ ಅಸ್ತ್ರವಾಗಿ ಜಿಎಸ್‌ಟಿ ಬಳಸಿಕೊಂಡು ಚುನಾವಣೆಯನ್ನು ಎದುರಿಸಲು ಸಜಾಗಿದ್ದರು. ಆದರೆ, ಮತದಾರರು ಪ್ರತಿಪಕ್ಷದ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತೆ ಮಾಡಿರುವುದು ನಿಜಕ್ಕೂ ಶ್ಲಾಘನೀಯವೆಂದರು.
ಗೆಲುವಿಗೆ ಮೋದಿ-ಶಾ ಜೋಡಿ ಕಾರಣ: ಬಿಜೆಪಿ ನಂದಿನಿಗೌಡ ಮಾತನಾಡಿ, ಗುಜರಾತಿನಲ್ಲಿ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೇ ಮೂಲ ಕಾರಣ ಎಂದು ಹೇಳಿದರು.
ಗುಜರಾತ್ ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಗೆದ್ದು ಕಾಂಗ್ರೆಸ್ ಭವಿಷ್ಯವಿಲ್ಲ ಎಂಬುದನ್ನು ಮತ್ತೆ ತೋರಿಸಿದೆ. ರಾಜ್ಯದಲ್ಲೂ ಜನ ಬಿಜೆಪಿಯನ್ನು ಬೆಂಬಲಿಸಲಿದ್ದು, ಹಿಮಾಚಲ ಪ್ರದೇಶದಂತೆ ಮುಂಬರುವ ಚುನಾವಣೆಯಲ್ಲಿ ಕರ್ನಾಟಕವನ್ನು ಕಾಂಗ್ರೆಸ್ ನಿಂದ ಬಿಜೆಪಿ ತೆಗೆದುಕೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ. ಕೃಷ್ಣಪ್ಪ, ಉಪಾಧ್ಯಕ್ಷ ಟಿ.ಎಂ.ವೆಂಕಟೇಶ ನಗರ ಪ್ರಧಾನ ಕಾರ್ಯದರ್ಶಿ ಆನಂದ್ ಪೈ, ಸಾತನೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ತುಂಗಣಿ ಶಕ್ತಿ ಕೇಂದ್ರ ಅಧ್ಯಕ್ಷ ನಾಗರಾಜು,
ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷೆ ತಾಸಿಲ್ಲಾ ಖಾನ್, ಎಸ್.ಸಿ.ಮೋರ್ಚಾ ಅಧ್ಯಕ್ಷ ಭರತ್‌ಕುಮಾರ್, ಮುಖಂಡರಾದ ಸೂರನಹಳ್ಳಿ ರಾಮು, ಅನಕೇರು ಸಾತನೂರು ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಿಹಿಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.