Advertisement

ಬಿಜೆಪಿಗೆ 12 ಕ್ಷೇತ್ರಗಳಲ್ಲಿ ಗೆಲುವು: ಡಿಸಿಎಂ ವಿಶ್ವಾಸ

11:40 PM Dec 08, 2019 | Team Udayavani |

ಬಂಟ್ವಾಳ: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಲಿದೆ. 15 ಸ್ಥಾನಗಳನ್ನು ಗೆದ್ದರೂ ಅಚ್ಚರಿಯಿಲ್ಲ ಎಂದು ಉಪಮುಖ್ಯಮಂತ್ರಿ ಡಾ| ಸಿ.ಎನ್‌.ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆಗೊಳ್ಳಲಿದೆ.

Advertisement

ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ಎಲ್ಲ ಶಾಸಕರು ಸಚಿವರಾಗಲಿದ್ದು, ಮುಖ್ಯಮಂತ್ರಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದು, ಅದನ್ನು ಬೆಳೆಸಲು ರಾಜ್ಯ ಸರಕಾರ ನೂತನ ನೀತಿಯೊಂದನ್ನು ರೂಪಿಸುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next