Advertisement

ಬೆಳಗಾವಿ ,ಮಸ್ಕಿ , ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ -ಕಟೀಲ್

06:04 PM Apr 01, 2021 | Team Udayavani |

ಸವಣೂರು : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

ಪಾಲ್ತಾಡಿ ಗ್ರಾಮದ ಕುಂಜಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣಾ ಕಣದಲ್ಲಿ ಬಿಜೆಪಿಯ ಕಾರ್ಯಕರ್ತರು ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದು, ತಾನೂ ಈ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ತನ್ನ ಠೇವಣಿ ಕಳೆದುಕೊಳ್ಳಲಿದೆ. ಎಂದು ಅವರು ಹೇಳಿದರು.

ಇದನ್ನೂ ಓದಿ:ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಎನ್ ಎಸ್ ಎಸ್ ಘಟಕ ಕಡ್ಡಾಯ – ಡಾ. ನಾರಾಯಣಗೌಡ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಂಸದರು ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದೆ ಇದೇ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಕಾಮಗಾರಿ ಆರಂಭವಾಗಲಿದೆ ಅದೇ ರೀತಿ ಕುಲಶೇಖರ ಸಾನೂ ರಸ್ತೆಯ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎರಡು ತಿಂಗಳಲ್ಲಿ ಈ ರಸ್ತೆಯ ಕಾಮಗಾರಿಯೂ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next