Advertisement

Davangere ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜೀನಾಮೆ: ಕಾಂಗ್ರೆಸ್ ಶಾಸಕ

06:35 PM Mar 22, 2024 | Team Udayavani |

ದಾವಣಗೆರೆ: ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಂದು ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಘೋಷಿಸಿದ್ದಾರೆ.

Advertisement

ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಲೆ ಇದೆ. ಜನ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಕಾಂಗ್ರೆಸ್‌ನಿಂದ ಕತ್ತೆಗೆ ಟಿಕೆಟ್ ಕೊಟ್ಟರೂ ಗೆಲ್ಲುವ ವಾತಾವರಣವಿದೆ. ಕಾಂಗ್ರೆಸ್‌ನಿಂದ ಯಾರೇ ನಿಂತರೂ ಗೆದ್ದು ಬರುತ್ತಾರೆ ಎಂದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಬಂಡಾಯ ನಾಟಕವಷ್ಟೇ ಎಂದ ಅವರು, ರೇಣುಕಾಚಾರ್ಯ ಅವರಿಗೆ ತಾಕತ್ತಿದ್ದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿ ನೋಡೋಣ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next