Advertisement

ಉಪ ಚುನಾವಣೆಯ 15 ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು: ಈಶ್ವರಪ್ಪ

09:44 AM Nov 16, 2019 | Sriram |

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್‌- ಜೆಡಿಎಸ್‌ನಿಂದ ಬೇಸತ್ತ ಜನರು ಬಿಜೆಪಿ ಜೊತೆಗಿದ್ದಾರೆ. ಇದೇ ಕಾರಣಕ್ಕೆ ಅನರ್ಹ ಶಾಸಕರೂ ಬಿಜೆಪಿ ಸೇರಿದ್ದಾರೆ. ನಿನ್ನೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜನ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಉಪ ಚುನಾವಣೆಯಲ್ಲಿ ಅಥಣಿ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ಅಥಣಿ ಸೇರಿದಂತೆ ಹದಿನೈದು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ ನೀಡಬಾರದು ಎಂಬ ಉದ್ದೇಶವಿರಲಿಲ್ಲ. ಆದರೆ ಅನರ್ಹ ಶಾಸಕರಿಂದಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವರಿಗೆ ಅನ್ಯಾಯ ಮಾಡಲು ಸಾಧ್ಯವಿಲ್ಲ. ಅವರಿಗೆ ಸ್ಥಾನಮಾನ ನೀಡಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಕಾಂತೇಶ್‌ ರಾಣೆಬೆನ್ನೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮಾಧ್ಯಮದವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next