Advertisement

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಿದ್ಧ

12:24 PM Jul 29, 2018 | Team Udayavani |

ತಿ.ನರಸೀಪುರ: ವಿಶ್ವದ ಮಟ್ಟದಲ್ಲಿ ಭಾರತಕ್ಕೆ ಆರ್ಥಿಕವಾಗಿ ಅಭಿವೃದ್ಧಿಗೊಂಡ 6ನೇ ರಾಷ್ಟ್ರವೆಂಬ ಹೆಗ್ಗಳಿಕೆ ತಂದುಕೊಟ್ಟಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ  ಭವಿಷ್ಯ ನುಡಿದರು.

Advertisement

ತಾಲೂಕಿನ ವಾಟಾಳು ಗ್ರಾಮದ ಶ್ರೀ ಸೂರ್ಯಸಿಂಹಾಸನ ಮಠಕ್ಕೆ ಶನಿವಾರ ಬೇಟಿ ನೀಡಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಕೈಪಿಡಿಯನ್ನು ವಿತರಿಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು.

ನರೇಂದ್ರ ಮೋದಿ ಅವರು ಭಾರತ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಲಿಷ್ಟಗೊಳಿಸುತ್ತಿದ್ದು, ಅವಧಿಯಲ್ಲಿ ಸಫ‌ಲರಾಗಿರುವುದರಿಂದ ಜನರು ಮುಂದಿನ ಎರಡು ಅವಧಿಗೂ ಬಿಜೆಪಿಯನ್ನೇ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗವನ್ನು ಕಟ್ಟಿ ಕೇಂದ್ರದಲ್ಲಿ ಗದ್ದುಗೆ ಹಿಡಿಯಲು ಹೊರಟಿರುವ ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ಮಾಯಾವತಿ ಹಾಗೂ ಇನ್ನಿತರ ಯಾವುದೇ ನಾಯಕರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸರಿಸಾಟಿಯಾಗಿ ನಿಲ್ಲಲಾರರು ಎಂದು ಬಣ್ಣಿಸಿದರು.

ಮೈತ್ರಿ ಸರ್ಕಾರ ಹೆಚ್ಚು ಕಾಲ ಉಳಿಯಲ್ಲ: ರಾಹುಲ್‌ ಗಾಂಧಿ ಸೂಚನೆಯಂತೆ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಆಡಳಿತರೂಢ ಸಮ್ಮಿಶ್ರ ಸರ್ಕಾರ ನುಂಗಲಾರದ ತುತ್ತಾಗಿದೆ. ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿದ್ದಕ್ಕೆ ಜೆಡಿಎಸ್‌ ನಾಯಕರಲ್ಲೂ ಅಸಮಾಧಾನವಿದೆ.

Advertisement

ಇಬ್ಬರ ನಡುವಿನ ಭಿನ್ನಮತ ಯಾವುದೇ ವೇಳೆ ಸ್ಫೋಟಗೊಳ್ಳುವುದರಿಂದ ಮೈತ್ರಿ ಸರ್ಕಾರ ಹೆಚ್ಚು ಕಾಲ ಅಧಿಕಾರದಲ್ಲಿ ಉಳಿಯುವುದಿಲ್ಲ. ಬಿಜೆಪಿಗೆ ಸರ್ಕಾರ ರಚನೆ ಮಾಡುವ ತರಾತುರಿಯೂ ಇಲ್ಲ. ಈ ಬಗ್ಗೆ ಹೈಕಮಾಂಡ್‌ ಹಾಗೂ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೋಟೆ ಎಂ.ಶಿವಣ್ಣ ತಿಳಿಸಿದರು.  

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್‌.ಸಿ.ಅಶೋಕ್‌, ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ಕ್ಷೇತ್ರಾಧ್ಯಕ್ಷ ಹೆಚ್‌.ಎಂ.ಪರಶಿವಮೂರ್ತಿ, ಹಿರಿಯ ಮುಖಂಡ ರಾಜಕುಮಾರ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next