Advertisement

ರಾಜ್ಯದಲ್ಲೂ ಬಿಜೆಪಿ ಜಯಭೇರಿ: ಬಿಎಸ್‌ವೈ ವಿಶ್ವಾಸ 

06:00 AM Dec 19, 2017 | |

ಬೆಂಗಳೂರು: ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫ‌ಲಿತಾಂಶ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಪ್ರತಿಫ‌ಲನಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸೋಮವಾರ ಮಲ್ಲೇಶ್ವರದ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಲ್ಲಿ ಪ್ರಧಾನಿ
ನರೇಂದ್ರ ಮೋದಿಯವರು ಕೈಗೊಂಡ ನೋಟು ಅಮಾನ್ಯಿà ಕರಣ ಮತ್ತು ಜಿಎಸ್‌ಟಿ ಅನುಷ್ಠಾನದಿಂದ ಜನರಿಗೆ ತೊಂದರೆ
ಯಾಗಿದೆ ಎಂದು ಕಾಂಗ್ರೆಸ್‌ ಅಪಪ್ರಚಾರ ಮಾಡಿದರೂ ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ಜನ ಈ ಎರಡೂ ಕ್ರಾಂತಿಕಾರಕ ನಿರ್ಧಾರಗಳಿಗೆ ಬೆಂಬಲ ಸೂಚಿಸಿರುವುದಕ್ಕೆ ಈ ಗೆಲುವೇ ಸಾಕ್ಷಿ. ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಜನ ಇದೇ ಉತ್ತರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಕರ್ನಾಟಕಕ್ಕೆ ಹೆಚ್ಚಿನ ಸಮಯ ನೀಡಲಿದ್ದು, ಅವರ ಸಹಕಾರದೊಂದಿಗೆ ಬಿಜೆಪಿ
ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಗುಜರಾತ್‌ ಚುನಾವಣೆ ವೇಳೆ ಕಾಂಗ್ರೆಸ್‌ನ ಕಪಿಲ್‌ ಸಿಬಲ್‌ ಅವರು ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಮತ್ತು ಮಣಿಶಂಕರ್‌ ಅಯ್ಯರ್‌ ಅವರು ಪ್ರಧಾನಿ ನರೇಂದ್ರ ಮೋದಿ ವಿರುದಟಛಿ ಬಳಸಿದ ಪದಗಳು ಕಾಂಗ್ರೆಸ್‌ಗೆ ಮುಳುವಾದವು. ರಾಜ್ಯದಲ್ಲೂ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಮತ್ತು ಪ್ರತಾಪ್‌ ಸಿಂಹ ನೀಡುತ್ತಿರುವ ಹೇಳಿಕೆಗಳು ಬಿಜೆಪಿಗೆ ಮುಳುವಾಗಬ ಹುದೇ ಎಂಬ ಪ್ರಶ್ನೆಗೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳದೆ ಒಂದೆರಡು ಪದ ಬಳಕೆ ಮಾಡಿದಾಗ ಅದನ್ನು ಸೂಕ್ಷ್ಮವಾಗಿ ಸರಿಪಡಿಸುವ ಕೆಲಸ ಮಾಡಲಾಗುತ್ತದೆ. ಈಗಾಗಲೇ ಅವರಲ್ಲಿ ಈ ಕುರಿತು ಮಾತನಾಡಿದ್ದೇನೆ ಎಂದರು.

ಸಿಎಂ ಹೇಳಿಕೆ ಬಾಲಿಶತನದ್ದು ಆಡಳಿತ ವಿರೋಧಿ ಅಲೆಯ ಮೇಲೆ ಸವಾರಿ ಮಾಡಿ ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುತ್ತಿದ್ದಂತೆ, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಬಿಜೆಪಿಯ ಕನಸು ಇನ್ನಷ್ಟು ಚಿಗುರಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. ಇದೇ ವೇಳೆ, ಪ್ರಮುಖ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ಪಾಲಿಗೆ ಫ‌ಲಿತಾಂಶ ಸ್ವಲ್ಪಮಟ್ಟಿನ “ನಿರಾಸೆ ‘ತಂದೊಡ್ಡಿದ್ದು, ತಮ್ಮ ಬುಟ್ಟಿಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಕೈ ಹಾಕಬಹುದು ಎಂಬ ಆತಂಕ ಕಾಡುತ್ತಿದೆ.

Advertisement

ಕಾಂಗ್ರೆಸ್‌ ಚಟುವಟಿಕೆ ಚುರುಕುದ್ದಗ “ಕೈ’ಗೆ ತಳಮಳ, ಖುಷಿಯಲ್ಲಿ “ಕಮಲ’ ರಾಷ್ಟ್ರೀಯ ನಾಯಕರ ಚಿತ್ತ ರಾಜ್ಯದತ್ತ
ಬೆಂಗಳೂರು: ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫ‌ಲಿತಾಂಶ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿ ಬಿಜೆಪಿ ರಾಷ್ಟ್ರೀಯ ನಾಯಕರ ಗುರಿ ಈಗ ಕರ್ನಾಟಕವಾಗಲಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಾಡ್ಯವಾಗಿರುವ ಏಕೈಕ ರಾಜ್ಯ ಕರ್ನಾಟವಾಗಲಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕವನ್ನು ಮತ್ತೆ ಪಕ್ಷದ ತೆಕ್ಕೆಗೆ ಸೆಳೆದುಕೊಳ್ಳಲು ರಾಜ್ಯಕ್ಕೆ ಹೆಚ್ಚು ಒತ್ತು ನೀಡಲಿದ್ದಾರೆ. ಅಮಿತ್‌ ಶಾ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಬಂದು ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರಗಳನ್ನು ಹೆಣೆಯಲಿದ್ದಾರೆ. ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜ.28ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆ ಕಾರ್ಯಕ್ರಮದ ಮೂಲಕವೇ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆ ಮತ್ತು ಮುಂದೆ ನಡೆಯಲಿರುವ ನವ ಶಕ್ತಿ ಸಮಾವೇಶಗಳಿಗೆ ಕೇಂದ್ರ ಸಚಿವರು ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು, ಪಕ್ಷದ ರಾಷ್ಟ್ರೀಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಮುಕ್ತಗೊಳಿಸುವ ತಮ್ಮ ಯೋಜನೆಗೆ ಕರ್ನಾಟವನ್ನು ಬಿಜೆಪಿ ಕಾರ್ಯಕ್ಷೇತ್ರ ಮಾಡಿಕೊಳ್ಳಲಿದೆ.

ಚುನಾವಣೆಗಳಲ್ಲಿ ಮತಯಂತ್ರಗಳನ್ನು (ಇವಿಎಂ) ಬಳಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದಟಛಿ ಕಿಡಿಕಾರಿದ ಯಡಿಯೂರಪ್ಪ,ಇದೊಂದು ಬಾಲಿಶಹೇಳಿಕೆ ಎಂದಿದ್ದಾರೆ. ಆಡಳಿತ ವಿರೋಧಿ ಅಲೆ ಇದ್ದರೂ ಬಿಜೆಪಿ ಗೆಲುವು ಸಾಧಿಸಿದೆ ಎಂದರೆ ಸಹಜವಾಗಿಯೇ ಇವಿಎಂ ಮೇಲೆ ಅನುಮಾನ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವಿಎಂ ಬಂದ ಮೇಲೆ ಅನೇಕ ಕಡೆ ಕಾಂಗ್ರೆಸ್‌ ಗೆದ್ದಿದ್ದು, ಕೆಲವೆಡೆ ಅಧಿಕಾರಕ್ಕೂ ಬಂದಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಇವಿಎಂ ಬಳಸಿದ ಚುನಾವಣೆಯಲ್ಲೇ ಗೆದ್ದಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಿಎಂ ಸಿದ್ದರಾಮಯ್ಯ ದೇವಸ್ಥಾನಕ್ಕೆ ಹೋಗಲಿ: ಗುಜರಾತ್‌ ಚುನಾವಣೆ ಸಂದರ್ಭದಲ್ಲಿ ರಾಹುಲ್‌ ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಹಿಂದೂಗಳ ಮತ ಗಳಿಸಲು ಮಾಡಿದ ತಂತ್ರಗಾರಿಕೆಯನ್ನು ರಾಜ್ಯದಲ್ಲೂ ಅನುಸರಿಸಿದರೆ ಅದು ಬಿಜೆಪಿಗೆ ಹಿನ್ನಡೆಯಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ದೇವರ ದಯೆಯಿಂದ ಚುನಾವಣೆ ನೆಪದಲ್ಲಾದರೂ ದೇವಸ್ಥಾನಗಳಿಗೆ ಹೋಗಲಿ. ರಾಹುಲ್‌ ಅವರಿಗಿಂತ ಮೊದಲು ಸಿದ್ದರಾಮಯ್ಯ ಅವರು ಹೋಗಲಿ. ಆದರೆ ಮೀನು, ಕೋಳಿ ಮಾಂಸ ತಿನ್ನದೆ ದೇವರ ದರ್ಶನ ಮಾಡಿ ಬರಲಿ ಎಂದು ಸಲಹೆ ನೀಡುತ್ತೇನೆ ಎಂದರು.

ಬಿಎಸ್‌ವೈಗೆ ಆತಂಕ… ಖುಷಿ
ಬೆಂಗಳೂರು:
ಖುಷಿ…ಆತಂಕ…ಖುಷಿ….ಇದು ಸೋಮವಾರ ಬೆಳಗ್ಗೆ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಎದುರಾದ ಪರಿಸ್ಥಿತಿ. ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫ‌ಲಿತಾಂಶದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದ ಅವರು ಬೆಳಗ್ಗೆ ಎಂಟು ಗಂಟೆಗೆ ಸಿದಟಛಿರಾಗಿ ಟೀವಿ ಮುಂದೆ ಕುಳಿತಿದ್ದರು. ಅಲ್ಲಿಯೇ ತಿಂಡಿ ತಿನ್ನುತ್ತಾ ಫ‌ಲಿತಾಂಶದ ಪ್ರತಿಕ್ಷಣದ ಮಾಹಿತಿಯನ್ನು ವೀಕ್ಷಿಸುತ್ತಿದ್ದರು. ಆರಂಭದಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಬರುತ್ತಿದ್ದಂತೆ ಖುಷಿಯಿಂದ ಸಂಭ್ರಮಿಸಿ ದರು. ಸುಮಾರು 10 ಗಂಟೆ ವೇಳೆಗೆ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದೆ ಎಂಬ ಮಾಹಿತಿ ಬರುತ್ತಿದ್ದಂತೆ ಆತಂಕಗೊಂಡು ಕುಳಿತಲ್ಲೇ ಚಡಪಡಿಸಲಾರಂಭಿಸಿದರು.

ಆದರೆ, 11 ಗಂಟೆ ವೇಳೆ ಮತ್ತೆ ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಮಾಹಿತಿ ಪ್ರಕಟವಾಗುತ್ತಿದ್ದಂತೆ ಮತ್ತೆ ಖುಷಿಯಿಂದ ಸುತ್ತಲಿದ್ದವರ ಮುಖ ನೋಡಿ ನಸುನಕ್ಕರು. ಮಧ್ಯಾಹ್ನ 12 ಗಂಟೆ ವೇಳೆಗೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ವಾಗುತ್ತಿದ್ದಂತೆ ಮನೆಯಿಂದ ಹೊರಗೆ ಬಂದು ತಮಗಾಗಿ ಕಾದು ಕುಳಿತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು. ಮಧ್ಯಾಹ್ನ 1.50ರವರೆಗೂ ಮನೆಯಲ್ಲೇ ಇದ್ದು ಸಂಭ್ರಮದಿಂದ ಓಡಾಡಿದ ಯಡಿಯೂರಪ್ಪ ಅವರು 2 ಗಂಟೆ ಸುಮಾರಿಗೆ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಬಂದು ಕಾರ್ಯಕರ್ತರೊಂದಿಗೆ ಸಂಭ್ರಮಾ ಚರಣೆಯಲ್ಲಿ ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next