Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ ಅವರು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಸಿಲುಕಿ ಸಂತ್ರಸ್ತರಾದ ಕುಟುಂಬಗಳು ಇಂದಿಗೂ ದಿಕ್ಕು ಕಾಣದ ಕುರುಡರಂತೆ ಜೀವನ ಸಾಗಿಸುವ ಪರಿಸ್ಥಿತಿಯಲ್ಲಿದ್ದು, ಅವರ ನೋವಿಗೆ ಸ್ಪಂದಿಸಬೇಕಾದ ರಾಜ್ಯದ ಮೈತ್ರಿ ಸರಕಾರ ಕೇವಲ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಫೆವಿಕಾಲ್ ಸರಕಾರವಾಗಿ ಕುರ್ಚಿಗೆ ಅಂಟಿ ಕುಳಿತಿದೆ ಎಂದು ಟೀಕಿಸಿದರು.
Related Articles
ಕೊಡಗಿನ ಸಂತ್ರಸ್ತರಿಗಾಗಿ ದಾನಿಗಳು ಹಲವು ರೀತಿಯಲ್ಲಿ ನೆರವು ನೀಡಿದ್ದು, ಅದರಲ್ಲಿ ಸರಕಾರ ಎಷ್ಟು ಹಣವನ್ನು ವೆಚ್ಚ ಮಾಡಿದೆ ಎಂಬ ಬಗ್ಗೆ ಶ್ವೇತ್ರಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ ರು. ತಮ್ಯಮ ಪುತ್ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಕಾರಣಕ್ಕಾಗಿ ಮಂಡ್ಯ ಜಿಲ್ಲೆಯೊಂದಕ್ಕೇ 8 ಸಾವಿರ ಕೋಟಿ ರೂ.ಗಳ ನೆರವು ಘೋಷಿಸಿದ ಮುಖ್ಯಮಂತ್ರಿಗೆ ಕೊಡಗಿನ ಸಂತ್ರಸ್ತರಿಗೆ ನೆರವು ನೀಡಲು ಸರಕಾರ ಬಳಿ ಹಣವಿಲ್ಲವೇ ಎಂದು ಯಮುನಾ ಚಂಗಪ್ಪ ಪ್ರಶ್ನಿಸಿದರು.
Advertisement
ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಪವಿತ್ರಾ ಮಡಿಕೇರಿ ತಾಲೂಕು ಅಧ್ಯಕ್ಷೆ ಕವಿತಾ ಬೆಳ್ಯಪ್ಪ, ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ನಳಿನಿ ಗಣೇಶ್, ಮಡಿಕೇರಿ ನಗರಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ರಾಜ್ಯ ಸಮಿತಿ ಸದಸ್ಯೆ ಉಷಾ ತೇಜಸ್ವಿ ಉಪಸ್ಥಿತರಿದ್ದರು.
ಮಹಿಳಾ ಬಲದೇಶದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಗೆಲವು ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದಾಗಿದೆ. ಮಹಿಳಾ ಮೋರ್ಚಾದ ಕಾರ್ಯಕರ್ತರು ಮನೆಮನೆಗಳಿಗೆ ತೆರಳಿ ಮೋದಿ ಅವರ ಸಾಧನೆ, ಅವರ ಜನಪರ ಕಾರ್ಯಕ್ರಮಗಳು, ಜಾತ್ಯತೀತ ಮನೋಭಾವದ ಬಗ್ಗೆ ಮಹಿಳೆಯರಿಗೆ ಮನದಟ್ಟು ಮಾಡುವಲ್ಲಿ ಸಫಲರಾಗಿದ್ದಾರೆ. ಮೋದಿ ನೇತೃತ್ವದ ಸರಕಾರ 5 ವರ್ಷಗಳಲ್ಲಿ ಜಾತಿ ಧರ್ಮವನ್ನು ನೋಡದೆ ಎಲ್ಲÉ ಜಾತಿ, ಜನಾಂಗದವರಿಗೂ ಅನುಕೂಲವಾಗುವಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದಲ್ಲದೆ ಈ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಆಡಳಿತ ನಡೆಸಿದೆ ಎಂದು ಯಮುನಾ ಚಂಗಪ್ಪ ಹೇಳಿದರು.