Advertisement

ಭೂಪಿಂದರ್ ಸಿಂಗ್ ಹೂಡಾ ವರ್ತನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

06:39 PM Mar 11, 2021 | Team Udayavani |

ಬೆಂಗಳೂರು : ಹರಿಯಾಣದ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಯಲು ಮಹಿಳಾ ಶಾಸಕಿಯರನ್ನು ಬಳಸಿಕೊಂಡಿರುವುದು ಖಂಡನಾರ್ಹ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ ಅವರು ತಿಳಿಸಿದ್ದಾರೆ.

Advertisement

ಪ್ರತಿಭಟನೆಯ ವೇಳೆ ಶಾಸಕಿಯರನ್ನು ಟ್ರ್ಯಾಕ್ಟರ್ ಎಳೆಯಲು ಬಳಸಿಕೊಂಡದ್ದಕ್ಕೆ ‘ಜೀತ ಪದ್ಧತಿ’ಯನ್ನು ನೆನಪು ಮಾಡಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಈ ರೀತಿಯ ವರ್ತನೆ ತೋರಿದ ಹೂಡಾ ಅವರು, ಕಾಂಗ್ರೆಸ್ ಸಂಸ್ಕೃತಿಯನ್ನು ಅನಾವರಣಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಗೌರವಯುತ ಪ್ರತಿಭಟನೆ ಮಾಡುವುದೇ ಅವರ ಉದ್ದೇಶವಾಗಿದ್ದರೆ ಹೂಡಾ ಮತ್ತು ಇತರ ನಾಯಕರು ಶಾಸಕಿಯರನ್ನು ಟ್ರ್ಯಾಕ್ಟರ್‍ನಲ್ಲಿ ಕುಳ್ಳಿರಿಸಿ ತಾವು ಹಗ್ಗದಿಂದ ವಾಹನ ಎಳೆಯಬೇಕಿತ್ತು. ಆದರೆ, ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರಿಗೆ ಅವಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳೆಯರ ನಡುವಿನ ಅನುಪಾತವನ್ನು ಕಡಿಮೆ ಮಾಡಲು ನಮ್ಮ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು 2015ರಲ್ಲಿ “ಬೇಟಿ ಬಚಾವೊ, ಬೇಟಿ ಪಡಾವೊ” ಕಾರ್ಯಕ್ರಮಕ್ಕೆ ಹರಿಯಾಣ ರಾಜ್ಯದಿಂದ ಚಾಲನೆ ನೀಡಿದ್ದರು. ಅದೇ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರು ತಮ್ಮ ಕೆಟ್ಟ ಸಂಸ್ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಇದು ಖಂಡನೀಯ ಎಂದು ಶ್ರೀಮತಿ ಗೀತಾ ವಿವೇಕಾನಂದ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next