ಚಿತ್ರದುರ್ಗ: ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಾಗಿದ್ದ ಚಿತ್ರದುರ್ಗ ನಗರಸಭೆಯನ್ನು ವಶಕ್ಕೆ ಪಡೆದು ಕಮಲದ ಬಾವುಟ ಹಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಭಾನುವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 19 ನೇ ವಾರ್ಡ್ ಸದಸ್ಯೆ ತಿಪ್ಪಮ್ಮ ವೆಂಕಟೇಶ್ ಅಧ್ಯಕ್ಷರಾಗಿ, 28 ನೇ ವಾರ್ಡ್ ಸದಸ್ಯೆ ಶ್ವೇತಾ ವೀರೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಪರಿಶಿಷ್ಟ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಬಿಸಿಎಂ ಎ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿತ್ತು. ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲು ಅವಕಾಶ ಅವಕಾಶ ಕಲ್ಪಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿಪ್ಪಮ್ಮ ವೆಂಕಟೇಶಪ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ವೇತಾ ವೀರೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಪ್ರಸನ್ನ ಇಬ್ಬರ ಆಯ್ಕೆಯನ್ನು ಅವಿರೋಧ ಎಂದು ಘೋಷಿಸಿದರು.
ಇದನ್ನೂ ಓದಿ:ಯತ್ನಾಳ ಹೇಳಿದಂತೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಶಶಿಕಲಾ ಜೊಲ್ಲೆ
ಎರಡು ವರ್ಷಗಳ ಹಿಂದೆ ನಗರಸಭೆಗೆ ನಡೆದ ಚುನಾವಣೆ ವೇಳೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಶತಾಯಗತಾಯ ಐತಿಹಾಸಿಕ ನಗರ ಸಭೆಯಲ್ಲಿ ಬಿಜೆಪಿ ಆಡಳಿತಕ್ಕೆ ತರುವ ಪಟ್ಟು ಹಿಡಿದು ಅಭ್ಯರ್ಥಿಗಳ ಆಯ್ಕೆ ಮಾಡಿದ್ದರು. ಪರಿಣಾಮ 35 ಸದಸ್ಯ ಬಲದ ನಗರಾಭೆಯಲ್ಲಿ ಬಿಜೆಪಿ ಬರೋಬ್ಬರಿ 17 ಸ್ಥಾನ ಹಾಗೂ ಬಿಜೆಪಿ ಬೆಂಬಲಿತ ನಾಲ್ವರು ಪಕ್ಷೇತರರು ಗೆದ್ದಿದ್ದರು. ಈಗ ಒಟ್ಟಾರೆ 27 ಸದಸ್ಯ ಬಲ ಹೊಂದಿರುವ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.