Advertisement

ದಾವಣಗೆರೆ ಪಾಲಿಕೆ ಉಪಚುನಾವಣೆ: ಕೈ ತೆಕ್ಕೆಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಗೆದ್ದ ಬಿಜೆಪಿ

11:16 AM May 22, 2022 | Team Udayavani |

ದಾವಣಗೆರೆ: ಮಹಾನಗರ ಪಾಲಿಕೆಯ 24 ಮತ್ತು 37ನೇ ವಾರ್ಡ್‌ಗಳ ಉಪ ಚುನಾವಣೆಯಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್ ಜಯಭೇರಿ ಬಾರಿಸಿದ್ದಾರೆ.

Advertisement

ಭಾರೀ ಕುತೂಹಲ, ಬಿಜೆಪಿ ಮತ್ತು ಕಾಂಗ್ರೆಸಿನ ಪಾಲಿಗೆ ಅತ್ಯಂತ ಮಹತ್ವ ಮತ್ತು ಪ್ರತಿಷ್ಠೆಯ ವಿಷಯವಾಗಿದ್ದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳಿಬ್ಬರೂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಎರಡು ವಾರ್ಡ್‌ಗಳನ್ನು ಆಡಳಿತಾರೂಢ ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿದೆ.

28ನೇ ವಾರ್ಡ್‌ನ ಭಗತ್‌ಸಿಂಗ್ ನಗರದಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್ ಕಾಂಗ್ರೆಸ್‌ನ ಹುಲ್ಮನಿ ಗಣೇಶ್ ವಿರುದ್ಧ 681 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಜೆ.ಎನ್. ಶ್ರೀನಿವಾಸ್ 2565 ಮತಗಳ ಪಡೆದರೆ, ಕಾಂಗ್ರೆಸ್‌ನ ಹುಲ್ಮನೆ ಗಣೇಶ್ 1884 ಮತಗಳ ಗಳಿಸುವ ಮೂಲಕ ಸೋಲು ಅನುಭವಿಸಿದ್ದಾರೆ.

ಇದನ್ನೂ ಓದಿ:ಪುತ್ತೂರು: ಬಲ್ನಾಡು ಗ್ರಾ.ಪಂ.ಉಪಚುನಾವಣೆ ಫಲಿತಾಂಶ;ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಕಾಂಗ್ರೆಸ್ ಭಾರೀ ನಿರೀಕ್ಷೆ ಹೊಂದಿದ್ದ 37ನೇ ವಾರ್ಡ್‌ನಲ್ಲಿ ಸೋತಿದೆ. ಇಲ್ಲಿ ನಡೆದ ನೇರ ಪೈಪೋಟಿಯಲ್ಲಿ ಬಿಜೆಪಿಯ ಶ್ವೇತಾ ಶ್ರೀನಿವಾಸ್ ಕಾಂಗ್ರೆಸ್‌ನ ರೇಖಾರಾಣಿ ವಿರುದ್ಧ 793 ಮತಗಳಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಶ್ವೇತಾ ಶ್ರೀನಿವಾಸ್ 2096 ಮತಗಳು ಪಡೆದಿದ್ದಾರೆ. ರೇಖಾರಾಣಿ 1303 ಮತಗಳ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಜೆ.ಎನ್. ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗುವ ಮೂಲಕ ಸತತ ಎರಡನೇ ಬಾರಿಗೆ ನಗರಪಾಲಿಕೆ ಪ್ರವೇಶಿಸುವಲ್ಲಿ ದಂಪತಿ ಯಶಸ್ವಿಯಾಗಿದ್ದಾರೆ.

Advertisement

ಜೆ.ಎನ್. ಶ್ರೀನಿವಾಸ್ ಸತತ ಮೂರನೇ ಬಾರಿಗೆ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಶ್ವೇತಾ ಶ್ರೀನಿವಾಸ್ ಸತತ ಎರಡನೇ ಬಾರಿಗೆ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next