Advertisement
ತಾಲೂಕಿನ ಕುಂದೂರು ಹೋಬಳಿ ಹಂಚೂರು ಗ್ರಾಮ ಪಂಚಾಯಿತಿಯಲ್ಲಿ 11 ಸ್ಥಾನಗಳ ಸಂಖ್ಯಾ ಬಲ ಹೊಂದಿದ್ದು ಇಂದು ಮದ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿ ಚುನಾವಣಾ ಅಧಿಕಾರಿ ತಾಲೂಕು ತಹಶೀಲ್ದಾರ್ ಶಿರೀನ್ ತಾಜ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.
Related Articles
Advertisement
ಚುನಾವಣಾ ಘೋಷಣೆ ಯಾಗುತ್ತಿದ್ದಂತೆ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ,ನರೇಂದ್ರ ಮೋದಿ,ಹಾಗೂ ಬಸವರಾಜ್ ಬೊಮ್ಮಾಯಿ ಅವರ ಪರವಾಗಿ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ಮಾತನಾಡಿ ಕೇಂದ್ರದ ನರೇಂದ್ರ ಮೋದಿಜೀ ಹಾಗೂ ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಾ ಜನಮನ್ನಣೆ ಗಳಿಸಿದೆ ತಾಲ್ಲೂಕಿನಲ್ಲಿ ಕಳೆದ ವರ್ಷ ನಡೆದ 14 ಗ್ರಾಮ ಪಂಚಾಯಿತಿಗಳ ಪೈಕಿ ಸುಮಾರು 8 ಗ್ರಾಮ ಪಂಚಾಯಿತಿಗಳು ಬಿಜೆಪಿ ಪಾಲಾಗಿದೆ ಹಂಚೂರು ಗ್ರಾಮ ಪಂಚಾಯಿತಿಯಲ್ಲಿ ಇದುವರೆವಿಗೂ ಜೆಡಿಎಸ್ ಆಡಳಿತ ನಡೆಸಿತ್ತು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಗಿಂತ ಹೆಚ್ಚು ಸದಸ್ಯರನ್ನು ಪಡೆಯುವ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ ಮುಂದಿನ ದಿನಗಳಲ್ಲಿ ತಾಲ್ಲೂಕು,ಜಿಲ್ಲಾ ಪಂಚಾಯಿತಿ,ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ನಮ್ಮ ಪಕ್ಷ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗೆಲುವು ನಮ್ಮದಾಗಲಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಇರುವುದರಿಂದ ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ನೇತೃತ್ವದಲ್ಲಿ ಈ ಭಾಗದಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ಕೋಡಲಾಗುವುದು ಎಂದರು.
ಬಿಜೆಪಿ ಹಿರಿಯ ಮುಖಂಡ ಮಂಜುನಾಥ್ ಮಾತನಾಡಿ ಬಿಜೆಪಿ ಪಕ್ಷ ಹಂಚೂರು ಗ್ರಾಮ ಪಂಚಾಯಿತಿ ಅಧಿಕಾರ ಹಿಡಿಯುವ ಮೂಲಕ ಜೆಡಿಎಸ್ ನ ಅಧಪತನ ಶುರುವಾಗಿದೆ ನರೇಂದ್ರ ಮೋದಿಜಿ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಆಡಳಿತ ವೈಕರಿಯ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಈ ಭಾಗದಲ್ಲಿ ಇದುವರೆವಿಗೂ ಜೆಡಿಎಸ್ ಗೆ ಮತ ನೀಡಿದ್ದಾರೆ ಅದರೆ ಅಭಿವೃದ್ಧಿ ಮಾತ್ರ ಶೂನ್ಯ ಈ ಭಾಗದ ಜನರ ಮೂಗಿಗೆ ತುಪ್ಪ ಸವರುತ್ತಾ ಜನಸಾಮಾನ್ಯರನ್ನು ವಂಚಿಸಿದ್ದಾರೆ ಮುಂದಿನ ದಿನಗಳಲ್ಲಿ ಹಂಚೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ನೇತೃತ್ವದಲ್ಲಿ ಬಿಜೆಪಿ ಸಹಕಾರ ನೀಡಲಿದೆ ಎಂದರು.
ಬಿಜೆಪಿ ಯುವ ಮುಖಂಡ ಕಟ್ಟೆಗದ್ದೆ ನಾಗರಾಜ್ ಮಾತನಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಅದೇಶದ ಮೇರೆಗೆ ಹಂಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡಲು ಸೂಚಿಸಿದ್ದರು ಅದರಂತೆ ಬಿಜೆಪಿ ಸಂಘಟನೆ ಮಾಡುವ ಜೊತೆಗೆ ಹಂಚೂರು ಗ್ರಾಮ ಪಂಚಾಯಿತಿ ಅಧಿಕಾರ ಹಿಡಿಯಲಾಗಿದೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ನೇತೃತ್ವದಲ್ಲಿ ಅಭಿವೃದ್ಧಿ ಆಗಬೇಕಾಗಿದೆ ಬಿಜೆಪಿ ಜಿಲ್ಲಾ ಹಾಗೂ ತಾಲ್ಲೂಕು ಹಿರಿಯ ಮುಖಂಡ ಸಹಕಾರದಿಂದ ಅಭಿವೃದ್ಧಿ ಮಾಡಲಾಗುವುದು ಜನಸಾಮಾನ್ಯರು ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್,ಬಿಜೆಪಿ ಹಿರಿಯ ಮುಖಂಡ ಸಿಮೆಂಟ್ ಮಂಜುನಾಥ್,ಎ.ಹೆಚ್.ರಮೇಶ್,ಲೋಕೇಶ್ ಕದಾಳು,ರಾಜಕುಮಾರ್ ಸಕಲೇಶಪುರ,ಲೋಕೇಶ್ ಕಣಗಾಲ್,ಭರಣ್ ಕಣದಹಳ್ಳಿ,ಅಜಿತ್ ಚಿಕ್ಕಣಗಾಲ್,ಗಣೇಶ್ ಧರ್ಮಪುರಿ,ರುದ್ರೇಗೌಡ ಬಾಲಲೋಚನಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇತರರು ಉಪಸ್ಥಿತರಿದ್ದರು.