Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ. ಬಿಜೆಪಿಯವರು ಜಾಣ ಕುರುಡರಷ್ಟೇ ಅಲ್ಲ ಜಾಣ ಕಿವುಡರು ಹೌದು. ಅವರು ಬೇಕಾದಾಗ ಮೊಸಳೆ ಕಣ್ಣೀರು ಸುರಿಸುತ್ತಾರೆ. ಬೇಡವಾದಾಗ ಕಿವುಡತನ ಇದ್ದ ಹಾಗೇ ವರ್ತಿಸುತ್ತಾರೆ’ ಎಂದರು.
Related Articles
Advertisement
ಹುಬ್ಬಳ್ಳಿ:ನೇಹಾ ಹತ್ಯೆ ಅಮಾನುಷ ಕೃತ್ಯವಾಗಿದ್ದು, ಕಾಂಗ್ರೆಸ್ ಸರ್ಕಾರ ಜನತೆಯ ಬದುಕಿನ ಗ್ಯಾರಂಟಿಯನ್ನೆ ಕಸಿದುಕೊಂಡಿದೆ ಎಂದು ಬಿಜೆಪಿ ಶಾಸಕ ಹಾಗೂ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ರವಿವಾರ ಕಿಡಿಕಾರಿದ್ದಾರೆ.
ಅರವಿಂದನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ತುಷ್ಟಿಕರಣದ ನೀತಿಯಿಂದಾಗಿ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕರಿಂದ ಖಂಡನೆ ವ್ಯಕ್ತವಾಗಿಲ್ಲ ಎಂದ ಅವರು ಹಿರೇಮಠ ಕುಟುಂಬಕ್ಕೆ ಸಿಎಂ ಅಥವಾ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಸಾಂತ್ವನ ಹೇಳುವ ಕೆಲಸವನ್ನು ಮಾಡಿಲ್ಲ. ಹಿಂದೂಗಳಿಗೆ ಹಾಗೂ ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಬದುಕಿನ ಗ್ಯಾರಂಟಿ ಕೊಡದೆ, ಕೊಲೆ ಮಾಡಿದ ಆರೋಪಿಗೆ ಬದುಕಿನ ಗ್ಯಾರಂಟಿ ಕೊಡುವ ಮೂಲಕ ಮತಾಂಧ ನೀತಿಯನ್ನು ಅನುಸರಿಸುತ್ತಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಹೆಣ್ಣು ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಿರುವುದು, ರೈತರು, ಹಿಂದೂಗಳಿಗೆ ಹಾಗೂ ದಲಿತರ ಹಕ್ಕುಗಳಿಗೆ ಗ್ಯಾರಂಟಿ ಇಲ್ಲದಿರುವ ಗ್ಯಾರಂಟಿ ಎಂದ ಅವರು, ಅಲ್ಪಸಂಖ್ಯಾತರಿಗೆ ಗ್ಯಾರಂಟಿ, ಲವ್ ಜಿಹಾದ್ ಗ್ಯಾರಂಟಿ, ಗಲಭೆ ಕೋರರಿಗೆ ಗಲಭೆ ಪ್ರಕರಣ ಸರಿಪಡಿಸುವ ಗ್ಯಾರಂಟಿ, ವಿದ್ಯುತ್, ಸಾರಾಯಿ ತೆರಿಗೆ ಹೆಚ್ಚಳ ಮಾಡುವ ಕೆಲಸವೇ ಕಾಂಗ್ರೆಸ್ ನ ಗ್ಯಾರಂಟಿ ಎಂದು ಕಟುವಾಗಿ ಟೀಕಿಸಿದರು.
ರಾಜ್ಯದಲ್ಲಿ ಲವ್ ಜಿಹಾದ್ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಇದರಿಂದಾಗಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು.
ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ನೇಹಾ ಹತ್ಯೆ ನಡೆದ ಬಳಿಕ ಕೆಲ ಗಂಟೆಗಳಲ್ಲಿಯೇ ಪೊಲೀಸರು ಮೊಬೈಲ್ ವಶಕ್ಕೆ ಪಡೆದುಕೊಳ್ಳುತ್ತಾರೆ. ಆದರೆ ದುರ್ದೈವದ ಸಂಗತಿಯೆಂದರೇ ಮೊಬೈಲ್ ನಲ್ಲಿನ ವಿಡಿಯೋಗಳು ಹೇಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು ಎಂಬುದನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಹತ್ಯೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಕಸ್ಮಿಕ ಘಟನೆ ಎನ್ನುತ್ತಾರೆ ಎಂದರೇ ನಾಚಿಗೇಡಿನ ಸಂಗತಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನೇಹಾ ಹತ್ಯೆ ಪ್ರಕರಣವನ್ನು ಸರ್ಕಾರ ತಿರುಚುವ ಮೂಲಕ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನ ಮಗಳಿಗೆ ಸುರಕ್ಷತೆವಿಲ್ಲವೆಂದರೆ ಸಾಮಾನ್ಯ. ಜನರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು. ಈ ಕುರಿತು ತನಿಖೆ ನಡೆಸುವ ಮೂಲಕ, ರಾಜ್ಯ ಸರ್ಕಾರ ತುಷ್ಟಿಕರಣ ಬಿಟ್ಟು ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ ಎಂದು ಹಕ್ಕೋತ್ತಾಯ ಮಾಡಿದರು.