Advertisement

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

09:36 PM Apr 21, 2024 | Team Udayavani |

ಬೆಳಗಾವಿ : ಹುಬ್ಬಳ್ಳಿಯ ಕಾಲೇಜಿನಲ್ಲಿ ಕೊಲೆಯಾದ ನೇಹಾ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಅವರಿಗೆ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ. ಬಿಜೆಪಿಯವರು ಜಾಣ ಕುರುಡರಷ್ಟೇ ಅಲ್ಲ ಜಾಣ ಕಿವುಡರು ಹೌದು. ಅವರು ಬೇಕಾದಾಗ ಮೊಸಳೆ ಕಣ್ಣೀರು ಸುರಿಸುತ್ತಾರೆ. ಬೇಡವಾದಾಗ ಕಿವುಡತನ ಇದ್ದ ಹಾಗೇ ವರ್ತಿಸುತ್ತಾರೆ’ ಎಂದರು.

‘ನೇಹಾ ನಮ್ಮ ಸಮಾಜದ ಮಗಳು. ಹತ್ಯೆಯಾದ ತತ್ ಕ್ಷಣವೇ ಖಂಡನೆ ಮಾಡಿದ್ದೇನೆ. ನೇಹಾ ಪಾಲಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ಬಂದಿದ್ದೇನೆ. ಜವಾಬ್ದಾರಿ ಸ್ಥಾನದಲ್ಲಿ ಇರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಸರ್ಕಾರದ ಪರವಾಗಿ ಸಾಂತ್ವನ ಹೇಳಿ ಅತ್ಯಂತ ಕಠಿಣ ಶಬ್ಧಗಳಿಂದ ಘಟನೆಯನ್ನು ಖಂಡಿಸಿದ್ದೇನೆ’ ಎಂದರು.

ಬಿಜೆಪಿಯವರು ದೇಶದಲ್ಲಿ ಇಂತಹ ಪ್ರಕರಣಗಳು ಎಷ್ಟ್ಟೆಲ್ಲ ಆಗಿವೆ. ಇದರ ಬಗ್ಗೆ ಅವರ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.

ಕೊಲೆ ಮಾಡಿದ ಆರೋಪಿಗೆ ಬದುಕಿನ ಗ್ಯಾರಂಟಿ

Advertisement

ಹುಬ್ಬಳ್ಳಿ:ನೇಹಾ ಹತ್ಯೆ ಅಮಾನುಷ ಕೃತ್ಯವಾಗಿದ್ದು, ಕಾಂಗ್ರೆಸ್ ಸರ್ಕಾರ ಜನತೆಯ ಬದುಕಿನ ಗ್ಯಾರಂಟಿಯನ್ನೆ ಕಸಿದುಕೊಂಡಿದೆ ಎಂದು ಬಿಜೆಪಿ ಶಾಸಕ ಹಾಗೂ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ರವಿವಾರ ಕಿಡಿಕಾರಿದ್ದಾರೆ.

ಅರವಿಂದನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ತುಷ್ಟಿಕರಣದ ನೀತಿಯಿಂದಾಗಿ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕರಿಂದ ಖಂಡನೆ ವ್ಯಕ್ತವಾಗಿಲ್ಲ ಎಂದ ಅವರು ಹಿರೇಮಠ ಕುಟುಂಬಕ್ಕೆ ಸಿಎಂ ಅಥವಾ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಸಾಂತ್ವನ ಹೇಳುವ ಕೆಲಸವನ್ನು ಮಾಡಿಲ್ಲ. ಹಿಂದೂಗಳಿಗೆ ಹಾಗೂ ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಬದುಕಿನ ಗ್ಯಾರಂಟಿ ಕೊಡದೆ, ಕೊಲೆ ಮಾಡಿದ ಆರೋಪಿಗೆ ಬದುಕಿನ ಗ್ಯಾರಂಟಿ ಕೊಡುವ ಮೂಲಕ ಮತಾಂಧ ನೀತಿಯನ್ನು ಅನುಸರಿಸುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಹೆಣ್ಣು ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಿರುವುದು, ರೈತರು, ಹಿಂದೂಗಳಿಗೆ ಹಾಗೂ ದಲಿತರ ಹಕ್ಕುಗಳಿಗೆ ಗ್ಯಾರಂಟಿ ಇಲ್ಲದಿರುವ ಗ್ಯಾರಂಟಿ ಎಂದ ಅವರು, ಅಲ್ಪಸಂಖ್ಯಾತರಿಗೆ ಗ್ಯಾರಂಟಿ, ಲವ್ ಜಿಹಾದ್ ಗ್ಯಾರಂಟಿ, ಗಲಭೆ ಕೋರರಿಗೆ ಗಲಭೆ ಪ್ರಕರಣ ಸರಿಪಡಿಸುವ ಗ್ಯಾರಂಟಿ, ವಿದ್ಯುತ್, ಸಾರಾಯಿ ತೆರಿಗೆ ಹೆಚ್ಚಳ ಮಾಡುವ ಕೆಲಸವೇ ಕಾಂಗ್ರೆಸ್ ನ ಗ್ಯಾರಂಟಿ ಎಂದು ಕಟುವಾಗಿ ಟೀಕಿಸಿದರು.

ರಾಜ್ಯದಲ್ಲಿ ಲವ್ ಜಿಹಾದ್ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಇದರಿಂದಾಗಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು.

ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ನೇಹಾ ಹತ್ಯೆ ನಡೆದ ಬಳಿಕ ಕೆಲ ಗಂಟೆಗಳಲ್ಲಿಯೇ ಪೊಲೀಸರು ಮೊಬೈಲ್ ವಶಕ್ಕೆ ಪಡೆದುಕೊಳ್ಳುತ್ತಾರೆ. ಆದರೆ ದುರ್ದೈವದ ಸಂಗತಿಯೆಂದರೇ ಮೊಬೈಲ್ ನಲ್ಲಿನ ವಿಡಿಯೋಗಳು ಹೇಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು ಎಂಬುದನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. ‌

ಹತ್ಯೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಕಸ್ಮಿಕ ಘಟನೆ ಎನ್ನುತ್ತಾರೆ ಎಂದರೇ ನಾಚಿಗೇಡಿನ ಸಂಗತಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನೇಹಾ ಹತ್ಯೆ ಪ್ರಕರಣವನ್ನು ಸರ್ಕಾರ ತಿರುಚುವ ಮೂಲಕ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನ ಮಗಳಿಗೆ ಸುರಕ್ಷತೆವಿಲ್ಲವೆಂದರೆ ಸಾಮಾನ್ಯ. ಜನರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು. ಈ ಕುರಿತು ತನಿಖೆ ನಡೆಸುವ ಮೂಲಕ, ರಾಜ್ಯ ಸರ್ಕಾರ ತುಷ್ಟಿಕರಣ ಬಿಟ್ಟು ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ ಎಂದು ಹಕ್ಕೋತ್ತಾಯ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next