ಚಿಕ್ಕಮಗಳೂರು: ಗ್ರಾಪಂ ಚುನಾಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವಂತೆ ಪಕ್ಷದ ಮುಖಂಡರುಶ್ರಮಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ಚಿಕ್ಕಮಗಳೂರು ಮತ್ತು ಆಲ್ದೂರು ಮಂಡಲಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಲುವಾಗಿ ಪಕ್ಷದ ನಗರ ಮತ್ತು ಗ್ರಾಮಾಂತರ ಮುಖಂಡರನ್ನು ಪ್ರಭಾರವಾಗಿ ನೇಮಕ ಮಾಡಲಾಗಿದ್ದು, ಅಭ್ಯರ್ಥಿಗಳ ಗೆಲುವಿಗೆಶ್ರಮವಹಿಸಿ ದುಡಿಯಬೇಕೆಂದು ತಿಳಿಸಿದರು.ಗ್ರಾಮೀಣ ಪ್ರದೇಶದಲ್ಲಿ ನಮ್ಮ ಕಾರ್ಯಕರ್ತರು ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆಹಾಗೂ ಜಿಪಂ, ತಾಪಂ ಚುನಾವಣೆಯಲ್ಲಿ ಶ್ರಮವಹಿಸಿದುಡಿದಿದ್ದು, ನಾವೆಲ್ಲರೂ ಈಗ ಅವರ ಬೆನ್ನಿಗೆ ನಿಂತುಪಕ್ಷದ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸುವ ಮೂಲಕ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.
ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಗ್ರಾಮಗಳನ್ನುಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದರು. ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಈಗಾಗಲೇ ಪ್ರಭಾರಿ ಪ್ರಮುಖರನ್ನು ನೇಮಕ ಮಾಡಿದ್ದು, ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರಡಪ್ಪ ಮಾತನಾಡಿ, ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಬೀರೂರು ಮತ್ತು ಕೊಪ್ಪ ತಾಲೂಕಿನಲ್ಲಿ ಸ್ವರಾಜ್ ಸಮಾವೇಶವನ್ನು ನಡೆಸಲಾಗಿದೆ. ಈಗಾಗಲೇ ಮಂಡಲ ಮುಖಂಡರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸಂಖ್ಯೆ ಬಿಜೆಪಿಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿ ಸಲಿದ್ದಾರೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ತಾಪಂ ಸದಸ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ಆಲ್ದೂರು ಮಂಡಲ ಅಧ್ಯಕ್ಷ ದಿನೇಶ್ ಮುಗಳವಳ್ಳಿ, ಜಿಪಂ ಉಪಾಧ್ಯಕ್ಷಸೋಮಶೇಖರ್, ಬಿಜೆಪಿ ಮುಖಂಡರಾದ ಎಚ್.ಡಿ. ತಮ್ಮಯ್ಯ, ಪ್ರೇಮ್‌ಕುಮಾರ್, ರಾಜಪ್ಪ, ವರಸಿದ್ಧಿ ವೇಣುಗೋಪಾಲ್ ಇದ್ದರು.