Advertisement

ಗೃಹ ಸಚಿವರ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

02:10 PM May 07, 2019 | Team Udayavani |

ಹಾಸನ: ರಾಜ್ಯ ಸರ್ಕಾರದ ಗೃಹ ಸಚಿವರು ದಬ್ಟಾಳಿಕೆ ಮಾಡುತ್ತಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮಾಡು ವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಕಪ್ಪುಪಟ್ಟಿ ಧರಿಸಿ ಮೌನ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ರಾಜ್ಯದ ಸಮ್ಮಿಶ್ರ ಸರ್ಕಾರವು ಕಳೆದ ಕೆಲವು ತಿಂಗಳಿನಿಂದ ಮಾಧ್ಯಮ ಪ್ರತಿನಿಧಿಗಳು ಹಾಗೂ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ. ದಬ್ಟಾಳಿಕೆ ಮತ್ತು ಸೇಡಿನ ಪ್ರಕರಣಗಳು ನಡೆದ ಸಂದರ್ಭದಲ್ಲಿ ಬಿಜೆಪಿಯಿಂದ ದೂರು ನೀಡಿದರೂ ಸರ್ಕಾರ ಈ ವರೆಗೂ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಪಕ್ಷಪಾತ ಧೋರಣೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದರು. ಕೆ.ಆರ್‌.ಪೇಟೆ ಜೆಡಿಎಸ್‌ ಶಾಸಕ ನಾರಾಯಣಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರ ನಡೆಸುತ್ತಿದ್ದ ಚಿತ್ರ ನಟರಾದ ಯಶ್‌ ಮತ್ತು ದರ್ಶನ್‌ ಅವರಿಗೆ ನೇರವಾಗಿ ಬೆದರಿಕೆ ಹಾಕಿದ್ದರು. ಈ ಎರಡು ಪ್ರಕರಣಗಳು ಜನರ ನಡುವೆ ದ್ವೇಷದ ವಾತಾವರಣ ಮೂಡಿಸಿ ಸಾಮಾಜಿಕ ಸಾಮರಸ್ಯ ಕೆಡಿಸುವಂತಹ ಅಪಾಯಗಳಿದ್ದರೂ ಈ ಬಗ್ಗೆ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಪಕ್ಷಪಾತಿ ಧೋರಣೆ ಪ್ರದರ್ಶಿಸಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಕರ್ತರನ್ನು ಜೈಲಿಗೆ ಕಳುಹಿಸಿದ ಸರ್ಕಾರ: ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಹಿತೈಷಿಗಳು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ರಾಜ್ಯದ ಗೃಹ ಸಚಿವರೇ ವಿಶೇಷ ಆಸಕ್ತಿ ವಹಿಸಿದ್ದರು. ಮಹೇಶ್‌ ವಿಕ್ರಂ ಹೆಗಡೆ, ಶ್ರುತಿ ಬೆಳ್ಳಕ್ಕಿ, ಶಾರದ ಡೈಮಂಡ್‌, ಹೇಮಂತ್‌ ಕುಮಾರ್‌ ಮತ್ತು ಅಜಿತ್‌ ಶೆಟ್ಟಿ ಹೇರಂಜಿ ಮೇಲೆ ನಿರಾಧಾರವಾದ ಪ್ರಕರಣ ಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗಿದೆ. ಇವರೆಲ್ಲರೂ ಬಿಜೆಪಿ ಮೇಲೆ ಅಭಿಮಾನ ಹೊಂದಿದ ವರು ಎಂದ ಕಾರಣಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ ಅವರ ವಿರುದ್ಧ ಸೇಡಿನ ಕ್ರಮ ಜರುಗಿಸಲಾಗಿದೆ ಎಂದರು.

ಲಿಂಗಾಯತ ಧರ್ಮ ವಿವಾದ: ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಲಿಂಗಾಯತ ಧರ್ಮ ವಿಭಜನೆ ಆಗಬೇಕೆಂದು ಸೋನಿಯಾಗಾಂಧಿಯವರಿಗೆ ಬರೆದಿ ದ್ದಾರೆ ಎನ್ನಲಾದ ಪತ್ರವನ್ನು ಹೇಮಂತ್‌ ಕುಮಾರ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸಿದ ಕಾರಣಕ್ಕೆ ಬಂಧಿತರಾಗಿದ್ದಾರೆ. ಬಿಜೆಪಿ ಬಗ್ಗೆ ಒಲವು ತೋರಿರುವುದೇ ಅಪರಾಧ ಎನ್ನುವಂತೆ ಈ ಪ್ರಕರಣ ದಲ್ಲಿ ಸ್ವತಃ ಗೃಹ ಮಂತ್ರಿಗಳು ವಿಶೇಷ ಆಸಕ್ತಿ ತೋರಿ ದ್ದಾರೆ. ಲಿಂಗಾಯತ ಧರ್ಮ ವಿಭಜನೆ ಯತ್ನದಲ್ಲಿ ಎಂ.ಬಿ.ಪಾಟೀಲ್ ಅವರು ಶಾಮಿಲಾಗಿದ್ದರು. ಆದರೇ ಅವರೇ ಈಗ ಇತರರು ವಿರುದ್ಧ ಕ್ರಮಕ್ಕೆ ಪೊಲೀಸ್‌ ದುರ್ಬಳಕೆ ಮಾಡುತ್ತಿದ್ದಾರೆ.

Advertisement

ಕೆಲ ಪ್ರಕರಣಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್‌ 307ರ ಅನ್ವಯ ಪ್ರಕಣ ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು, ಬಿಜೆಪಿ ಅಭಿಮಾನಿಗಳನ್ನು ಬಂಧಿಸಲಾಗಿದೆ ಎಂದರು.

ರಾಜ್ಯಪಾಲರಿಗೆ ಮನವಿ: ಇಷ್ಟೆಲ್ಲಾ ಘಟನೆಗಳು ನಡೆದರೂ ಮುಖ್ಯಮಂತ್ರಿ ಮೌನಕ್ಕೆ ಶರಣ ರಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲ್ಲರ ಹಕ್ಕು, ಸ್ವಾತಂತ್ರ್ಯ ವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕೆಂದು ಹಾಗೂ ರಾಜಕೀಯ ದ್ವೇಷವನ್ನು ಬದಿಗಿಟ್ಟು ಆಡಳಿತ ನಡೆಸಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನವಿಲೆ ಅಣ್ಣಪ್ಪ, ರಾಜ್ಯ ರೈತ ಮೋರ್ಚಾದ ರೇಣುಕುಮಾರ್‌, ಬಿಜೆಪಿ ರಾಜ್ಯ ಮಹಿಳಾ ಘಟಕದ ಪದಾಧಿಕಾರಿ ಸುಶೀಲಾ, ರತ್ನ, ಮುಖಂಡರಾದ ಹುಲ್ಲಸುರೇಶ್‌, ಶ್ರೀನಿವಾಸ್‌ ಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next