Advertisement

ಹಿಂದೂಗಳು ಬಹುಸಂಖ್ಯಾತರಾಗಿದ್ದರೆ ಬಿಜೆಪಿ 370ನೇ ವಿಧಿ ರದ್ದುಗೊಳಿಸ್ತಿರಲಿಲ್ಲ: ಚಿದಂಬರಂ

10:05 AM Aug 13, 2019 | Nagendra Trasi |

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ರಾಜ್ಯವನ್ನು ಇಬ್ಭಾಗಮಾಡಿರುವ ನಿರ್ಧಾರಕ್ಕೆ ಸಂಬಂಧಿಸಿದ ರಾಜಕೀಯ ವಾಗ್ದಾಳಿ ಇನ್ನೂ ಮುಂದುವರಿದಿದೆ. ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿದ್ದರಿಂದ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಆರೋಪಿಸಿದ್ದಾರೆ.

Advertisement

ಒಂದು ವೇಳೆ ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿದ್ದರೆ ಭಾರತೀಯ ಜನತಾ ಪಕ್ಷ 370ನೇ ವಿಧಿಯನ್ನು ರದ್ದುಗೊಳಿಸುತ್ತಿರಲಿಲ್ಲ ಎಂದು ದೂರಿದರು. ಕಾಶ್ಮೀರದಲ್ಲಿ ಹಿಂದೂಗಳು ಅಧಿಕ ಸಂಖ್ಯೆಯಲ್ಲಿದ್ದಿದ್ದರೆ ಆರ್ಟಿಕಲ್ 370 ಅನ್ನು ಮುಟ್ಟುತ್ತಿರಲಿಲ್ಲ, ಆದರೆ ಮುಸ್ಲಿಮರು ಹೆಚ್ಚು ಸಂಖ್ಯೆಯಲ್ಲಿ ಇದ್ದಿದ್ದರಿಂದ ಬಿಜೆಪಿ ರದ್ದುಗೊಳಿಸಿದೆ ಎಂದು ಚಿದಂಬರಂ ಹೇಳಿರುವುದಾಗಿ ಎಎನ್ ಐ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next