ರಾಯಪುರ : ರಾಷ್ಟ್ರಪತಿ ಚುನಾವಣೆಗೆ ಭಾರತೀಯ ಜನತಾ ಪಕ್ಷ ಈಗಿನ್ನೂ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆ ಜುಲೈ 17ರಂದು ನಡೆಯಲಿದೆ ಮತ್ತು ಜು.20ರಂದು ಫಲಿತಾಂಶ ಹೊರಬೀಳಲಿದೆ.
ವಿರೋಧ ಪಕ್ಷಗಳು ಎನ್‌ಡಿಎಯೇತರ ಪಕ್ಷಗಳನ್ನು ಸಮಾನ ವೇದಿಕೆಯಲ್ಲಿ ತರುವ ಮೂಲಕ ಸರ್ವಾನುಮತದ ಅಭ್ಯರ್ಥಿಯನ್ನು ತರುವ ಪ್ರಯತ್ನ ಮಾಡುತ್ತಿವೆ. ಆದರೆ ಈ ತನಕ ಆ ಯತ್ನಗಳು ಫಲಕಾರಿಯಾಗಿಲ್ಲ.
ಕೆಲವು ವರದಿಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಬಿಜೆಪಿ ನಾಯಕ ಲಾಲಕೃಷ್ಣ ಆಡ್ವಾಣಿ ಅವರನ್ನು ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ.
4,120 ಶಾಸಕರು, 776 ಚುನಾಯಿತ ಸಂಸದರು – ಒಟ್ಟು 4,896 ಮತದಾರರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.