Advertisement
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿ ಸದಸ್ಯತ್ವದ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿ ಒಬ್ಬರನ್ನೇ ಕಣಕ್ಕಿಳಿಸಿದ್ದು, ಬಿಜೆಪಿ ಸದಸ್ಯ ಮತದಾರರು ಶೇ. 60ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಪಕ್ಷದಿಂದ ನಮ್ಮ ಅಭ್ಯರ್ಥಿ ಪಿ.ಎಚ್. ಪೂಜಾರ ಅವರ ಗೆಲುವು ನಿಶ್ಚಿತ ಎಂದರು.
Related Articles
Advertisement
ಕಾಂಗ್ರೆಸ್ ಬಂಡುಕೋರ ಮಲ್ಲಿಕಾರ್ಜುನ ಲೋಣಿ ಅವರನ್ನು ಕಣದಿಂದ ಹಿಂದೆ ಸರಿದು ಅವಿರೋಧ ಆಯ್ಕೆಗೆ ಸಹಕರಿಸಿ ಎಂದು ಮನವಿ ಮಾಡಿದ್ದೆವು. ನಾನು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಲೋಣಿ ಅವರಿಗೆ ಕರೆ ಮಾಡಿದ್ದು ಸತ್ಯ. ಲೋಣಿ ಅವರು ತಾವು ಕಾಂಗ್ರೆಸ್ ನಿಷ್ಠನಾಗಿದ್ದು, ನಿಮ್ಮ ಮನವಿಗೆ ಸ್ಪಂದಿಸುವ ಪ್ರಮೇಯವೇ ಬರುವುದಿಲ್ಲ. ಹೀಗಾಗಿ ಈ ಹಂತದಲ್ಲಿ ಬಿಜೆಪಿ ಮತ್ತೂಂದು ಮತವನ್ನು ಲೋಣಿ ಅವರಿಗೆ ಕೊಡುವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಇನ್ನು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಅವರಿಗೆ ಸೋಲಿನ ಭೀತಿ ಆವರಿಸಿದೆ. ಪಕ್ಷದ ಬಂಡಾಯ ಅಭ್ಯರ್ಥಿಗಳು ಕಣದಲ್ಲಿ ಇರುವುದು ಅವರಲ್ಲಿ ಸೋಲಿನ ಭೀತಿ ಹುಟ್ಟುವಂತೆ ಮಾಡಿದೆ. ಕೈ ಪಕ್ಷದ ಆಂತರಿಕ ಸಂಘರ್ಷ ನಮ್ಮ ಬಿಜೆಪಿ ಅಭ್ಯರ್ಥಿ ಸುಲಭ ಗೆಲುವಿಗೆ ಸಹಕಾರಿ ಆಗಲಿದೆ ಎಂದರು.
ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಶಾಸಕ ರಮೇಶ ಭೂಸನೂರ, ಮಾಜಿ ಸಚಿವ ಜಿ.ಎಸ್. ನ್ಯಾಮಗೌಡ, ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಚಂದ್ರಶೇಖರ ಕವಟಗಿ ಇದ್ದರು.