Advertisement
ಬೃಹತ್ ಸಮಾವೇಶಕ್ಕೆ ಸಜ್ಜಾಗಿರುವ ದೊಡ್ಡಬಳ್ಳಾಪುರದಲ್ಲಿ ಕಣ್ಣು ಹಾಯಿಸಿದಲ್ಲೆಲ್ಲಾ ಬಿಜೆಪಿ ನಾಯಕರ ಫೋಟೋಗಳು, ಕಟೌಟ್‌ಗಳು, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಿಸುವುದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದು ಈ ಸಮಾವೇಶದ ಉದ್ದೇಶವಾಗಿದೆ.
Related Articles
ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ. ಕಳೆದ ತಿಂಗಳು ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ಈ ಸಮಾವೇಶವನ್ನು ಬಳಸಿಕೊಳ್ಳಲು ತೀರ್ಮಾಸಿದೆ ಎಂದು ಹೇಳಲಾಗಿದೆ. ಜನಸ್ಪಂದನ ಸಮಾವೇಶದ ಮೂಲಕ ಬಿಜೆಪಿ ನಾಯಕರು ಸಂದೇಶ ರವಾನೆ ಮಾಡಲು ನಿರ್ಧರಿಸಿದ್ದಾರೆ.
Advertisement
ಸಚಿವರ ಉಸ್ತುವಾರಿ:ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಸಮಾವೇಶದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದು, ಮೂವರು ಸಚಿವರು ಸಮಾವೇಶದ ಯಶಸ್ಸಿಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಮೂರು ವರ್ಷದ ಅವಧಿಯಲ್ಲಿ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜನರಿಂದ ಜನರಿಗಾಗಿಯೇ ಜನಸ್ಪಂದನೆ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದ ಜನತೆಗೆ ನೀಡಿರುವ ವಿವಿಧ ಯೋಜನೆಗಳ ಫಲಾನುಭವಿಗಳಿಗಾಗಿಯೇ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರೇ ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಜನರಿಗಾಗಿಯೇ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದರಿಂದ ಜನಸ್ಪಂದನೆ ಸಮಾವೇಶವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. 3 ಲಕ್ಷ- ಜನರಿಗೆ ಭೋಜನ ಮತ್ತು ಆಸನ ವ್ಯವಸ್ಥೆ
200 ಎಕರೆ- ಪ್ರದೇಶದಲ್ಲಿ ವಾಹನ ನಿಲುಗಡೆ ವ್ಯವಸ್ಥೆ
5 ಸಾವಿರ – ಬಸ್‌ಗಳ ವ್ಯವಸ್ಥೆ
40 ಎಕರೆ- ಪ್ರದೇಶದಲ್ಲಿ ಪೆಂಡಾಲ್ ಅಭಿವೃದ್ಧಿ ಪರ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜನತೆಯ ನಡುವಿನ ಸ್ಪಂದನೆಯ ಸೇತುವೆಯೇ “ಜನಸ್ಪಂದನ ಸಮಾವೇಶ’. ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಲಕ್ಷಾಂತರ ಮಂದಿ ಅತ್ಯುತ್ಸಾಹದಿಂದ ಆಗಮಿಸಲಿದ್ದಾರೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ