ಪಾಟ್ನಾ:ಬಿಹಾರ ವಿಧಾನ ಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಆಡಳಿತರೂಢ ಬಿಜೆಪಿಯ ಮೈತ್ರಿಪಕ್ಷದಿಂದ ತೀವ್ರ ಸಂಕಷ್ಟ ಎದುರಾಗಿದ್ದು, ಇದು ಮುಂಬರುವ ಚುನಾವಣೆ ವೇಳೆ ತಿಕ್ಕಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಸೋಮವಾರ(ಸೆಪ್ಟೆಂಬರ್ 28, 2020) ಭೇಟಿಯಾಗಿ ಆದಷ್ಟು ಶೀಘ್ರ ಸ್ಥಾನ ಹಂಚಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಬೇಡಿಕೆ ಇಟ್ಟಿರುವುದಾಗಿ ವರದಿ ವಿವರಿಸಿದೆ.
ಒಂದು ವೇಳೆ ಸೀಟು ಹಂಚಿಕೆಯಲ್ಲಿ ತಮ್ಮ ಪಕ್ಷಕ್ಕೆ ಆದ್ಯತೆ ನೀಡದಿದ್ದಲ್ಲಿ, ಲೋಕ್ ಜನಶಕ್ತಿ ಪಕ್ಷ (ಎಲ್ ಜೆಪಿ) 243 ವಿಧಾನಸಭಾ ಕ್ಷೇತ್ರಗಳಲ್ಲಿ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಚಿರಾಗ್ ಜೆಪಿ ನಡ್ಡಾ ಅವರಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಇದನ್ನೂ ಓದಿ:ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ
ಮೂಲಗಳ ಪ್ರಕಾರ, ಎಲ್ ಜೆಪಿಗೆ ಸೀಟು ಹಂಚಿಕೆ ಮಾಡದಿದ್ದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ (ಜೆಡಿಯು) ವಿರುದ್ಧವೂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಚಿರಾಗ್ ಮಾತುಕತೆ ವೇಳೆ ಸ್ಪಷ್ಟಪಡಿಸಿದ್ದಾರೆನ್ನಲಾಗಿದೆ. ಇತ್ತೀಚೆಗಷ್ಟೇ ಎಲ್ ಜೆಪಿ ಜತೆ ಜೆಡಿಯು ಹೊಂದಾಣಿಕೆ ಇಲ್ಲ ಎಂಬ ಬಿಜೆಪಿ ವರಿಷ್ಠರ ಹೇಳಿಕೆಯನ್ನು ನೆನಪಿಸಿರುವುದಾಗಿ ವರದಿ ತಿಳಿಸಿದೆ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ