Advertisement

ಸರ್ಕಾರ ಪತನದ ಬಿಜೆಪಿ ಯತ್ನ ಹೊಸದಲ್ಲ: ಸಿಎಂ

09:35 AM Apr 24, 2019 | Team Udayavani |

ಚನ್ನರಾಯಪಟ್ಟಣ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದೇನು ಹೊಸದಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Advertisement

ಶಾಸಕ ಸಿ.ಎನ್‌.ಬಾಲಕೃಷ್ಣ ಅವರ ಮನೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮೈತ್ರಿ ಸರ್ಕಾರದ ಪತನಕ್ಕೆ ಬಿಜೆಪಿ ಮಾತ್ರವಲ್ಲ, ಕೆಲ ದೃಶ್ಯ ಮಾಧ್ಯಮಗಳೂ ಮುಂದಾಗುತ್ತಿವೆ. ಆದರೆ, ಸರ್ಕಾರ ಪತನವಾಗುವ ವಿಷಯ ಸತ್ಯಕ್ಕೆ ದೂರವಾದುದು. ಇನ್ನೂ ನಾಲ್ಕು ವರ್ಷ ಸುಭದ್ರವಾಗಿ ಇರಲಿದೆ.

ನಾನೇ ಮುಖ್ಯಮಂತ್ರಿಯಾಗಿ ರಾಜ್ಯದ 6 ಕೋಟಿ ಕನ್ನಡಿಗರ ಸೇವೆ ಮಾಡುತ್ತೇನೆ ಎಂದರು. ಸಿಎಂ ಕುಮಾರಸ್ವಾಮಿ ನಾಯಕತ್ವಕ್ಕೆ 20 ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆಂಬ ಮಾಹಿತಿಯನ್ನು ಯಾರು ಬಿಜೆಪಿಯವರಿಗೆ ನೀಡಿದರೋ ಗೊತ್ತಿಲ್ಲ.

ಈಗಾಗಲೇ ಅವರು ಗಡುವು ನೀಡಿ ಸರ್ಕಾರ ಪತನಗೊಳಿಸುವಲ್ಲಿ ವಿಫ‌ಲರಾಗಿದ್ಧಾರೆ. ನಮ್ಮ ಪಕ್ಷದ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳುವ ಕೆಲಸವನ್ನು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಮಾಡಿಕೊಳ್ಳುತ್ತೇನೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನನಗೆ ಸಹಕಾರ ನೀಡುತ್ತಿದ್ದಾರೆ ಎಂದರು.

ಅಧಿಕಾರದ ಕಚ್ಚಾಟದ ಪರಿಣಾಮ ಲೋಕಸಭಾ ಫಲಿತಾಂಶಕ್ಕೂ ಮುನ್ನವೇ ರಾಜ್ಯ ಸರ್ಕಾರ ಪತನವಾದರೂ ಆಶ್ಚರ್ಯ ಪಡಬೇಕಾಗಿಲ್ಲ. ಸಿದ್ದರಾಮಯ್ಯನವರು ಹೋದ ಕಡೆಗಳಲ್ಲಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ. ಬಿಜೆಪಿಯಿಂದ “ಆಪರೇಷನ್‌ ಕಮಲ’ ಮಾಡುವ ಅಗತ್ಯವೇ ಇಲ್ಲ. ಸರ್ಕಾರ ತನ್ನಿಂದ ತಾನೇ ಪತನಗೊಳ್ಳಲಿದೆ.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.

Advertisement
Advertisement

Udayavani is now on Telegram. Click here to join our channel and stay updated with the latest news.

Next