Advertisement

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

09:24 PM Jul 31, 2021 | Team Udayavani |

ನವದೆಹಲಿ: ಕೇಂದ್ರ ಸಚಿವ ಸ್ಥಾನ ಕಳೆದುಕೊಂಡ ಕಾರಣದಿಂದ ಬಿಜೆಪಿ ನಾಯಕ ಬಾಬುಲ್ ಸುಪ್ರಿಯೋ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Advertisement

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ರಾಜಕೀಯದ ನಂಟು ಹೊಂದದ ವ್ಯಕ್ತಿಯೂ ಸಹ ಸಾಮಾಜಿಕ ಕಾರ್ಯಗಳನ್ನು ಮಾಡಬಹುದು’ ಎಂದು ಬರೆದುಕೊಂಡಿದ್ದಾರೆ.

‘ನನ್ನ ತಂದೆ, ಪತ್ನಿ, ಮಗಳು ಮತ್ತು ಕೆಲವು ಆಪ್ತ ಸ್ನೇಹಿತರ ಮಾತುಗಳನ್ನು ಆಲಿಸಿದೆ. ಎಲ್ಲವನ್ನೂ ಆಲಿಸಿದ ನಂತರ, ಬೇರೆ ಯಾವುದೇ ಪಕ್ಷಕ್ಕೆ ಸೇರುವ ನಿರ್ಧಾರವನ್ನು ನಾನು ತೆಗೆದುಕೊಂಡಿಲ್ಲ. ನಾನು ಕಾಂಗ್ರೆಸ್, ಟಿಎಂಸಿ ಅಥವಾ ಸಿಪಿಎಂ ಪಕ್ಷಗಳನ್ನು ಸೇರುತ್ತಿಲ್ಲ. ಅವರೂ ಸಹ ನನ್ನನ್ನು ಕರೆದಿಲ್ಲ ಎಂದು ಖಚಿತಪಡಿಸುತ್ತಿದ್ದೇನೆ’ ಎಂಬುದಾಗಿ ಬಾಬುಲ್ ಸುಪ್ರಿಯೊ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯಗಳು ಇರುವುದಾಗಿಯೂ ಸುಪ್ರಿಯೊ ತಿಳಿಸಿದ್ದಾರೆ.ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 2014ರಿಂದಲೇ ಸುಪ್ರಿಯೋ ಅವರು ಹಲವು ಖಾತೆಗಳನ್ನು ನಿರ್ವಹಿಸಿದ್ದರು. ಜುಲೈ ತಿಂಗಳ ಆರಂಭದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ವೇಳೆ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next