Advertisement

ಆಕ್ಷೇಪದ ನಡುವೆಯೂ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

11:14 AM Jun 24, 2024 | Team Udayavani |

ನವದೆಹಲಿ: ಪ್ರತಿಪಕ್ಷಗಳ ತೀವ್ರ ಆಕ್ಷೇಪದ ನಡುವೆಯೂ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುನ್ನ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಸೋಮವಾರ ಲೋಕಸಭೆ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್‌ಗೆ ಪ್ರಮಾಣ ವಚನ ಬೋಧಿಸಿದರು. ಇಂದು ಆರಂಭವಾಗಲಿರುವ ಲೋಕಸಭೆ ಅಧಿವೇಶನದ ಅಧ್ಯಕ್ಷತೆ ವಹಿಸಲು ಮಹತಾಬ್ ಸಜ್ಜಾಗಿದ್ದು, ಹೊಸದಾಗಿ ಚುನಾಯಿತ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಉಸ್ತುವಾರಿ ವಹಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.

ಹಂಗಾಮಿ ಸ್ಪೀಕರ್‌ ಆಗಿ ಭರ್ತೃಹರಿ ಮಹತಾಬ್‌ ಆಯ್ಕೆಗೆ ಈಗಾಗಲೇ ವಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗಿದ್ದು ಇದರ ನಡುವೆ ಮಹತಾಬ್‌ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಇತ್ತ ಲೋಕಸಭಾ ಹಂಗಾಮಿ ಸ್ಪೀಕರ್‌ ಆಯ್ಕೆಯಾಗುತ್ತಿದ್ದಂತೆ ಸದನ ತೊರೆದ ವಿಪಕ್ಷ ನಾಯಕರು ಸ್ಪೀಕರ್ ಆಯ್ಕೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ದೆಹಲಿಯ ಗಾಂಧಿ ಪ್ರತಿಮೆ ಎದುರು ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Bomb threat; ಕಲಬುರಗಿ ವಿಮಾನ ನಿಲ್ದಾಣಕ್ಕೆ‌ ಬಾಂಬ್ ಬೆದರಿಕೆ: ವಿಮಾನಯಾನ ರದ್ದು

Advertisement

Advertisement

Udayavani is now on Telegram. Click here to join our channel and stay updated with the latest news.

Next