Advertisement
ಇದನ್ನೂ ಓದಿ:ಕಾಳಾವರ: ಫೈನಾನ್ಸ್ ಕಚೇರಿಯಲ್ಲೇ ಮಾಲಿಕನ ಕಡಿದು ಕೊಲೆ! ಹಣಕಾಸು ವಿಚಾರ ಶಂಕೆ
Related Articles
Advertisement
ಆದರೆ, ಬಹುತೇಕ ವಲಸೆ ಶಾಸಕರು ಕೋರ್ಟ್‌ನಿಂದ ಸ್ಟೇ ತಂದಿರುವುದರಿಂದ ಅವರನ್ನು ಹೊರಗಿಟ್ಟು ಸಂಪುಟ ರಚಿಸಿದರೆ, ಸುಗಮ ಸರ್ಕಾರ ನಡೆಸುವುದು ಕಷ್ಟ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ. ಮಾಜಿ ಸಿಎಂ ಯಡಿಯೂರಪ್ಪ ವಲಸಿಗರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿರುವುದರಿಂದ ಬಿಜೆಪಿ ಹೈಕಮಾಂಡ್ ಹಾಗೂ ನೂತನ ಸಿಎಂ ಬೊಮ್ಮಾಯಿ ಅವರಿಗೆ ಸಿಡಿ ಶಾಸಕರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂಬ ಮಾತುಗಳುಕೇಳಿ ಬರುತ್ತಿವೆ.
ಕೋರ್ಟ್ ಮೊರೆ ಹೋದ ರೇಣುಕಾಚಾರ್ಯಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ, ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಸುದ್ದಿಗಳು, ಚಿತ್ರಗಳು ಅಥವಾ ವಿಡಿಯೊ ತುಣುಕುಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಿದ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅವಹೇಳನಕಾರಿಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆಕೋರಿ ರೇಣುಕಾಚಾರ್ಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 20ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿದಾರರಿಗೆ ಅಪಮಾನ ವಾಗುವಂತಹ ಯಾವುದೇ ಸುದ್ದಿ ಬಿತ್ತರಿಸದಂತೆ ನಿರ್ಬಂಧಕಾಜ್ಞೆ ನೀಡಿ ಆದೇಶಿಸಿದೆ. ಅರ್ಜಿದಾರರು ಹಲವು ವರ್ಷಗಳ ಕಾಲ ಸಾರ್ವಜನಿಕ ಸೇವೆ ಸಲ್ಲಿಸಿದ್ದು, ವಿಧಾನ ಸಭಾ ಕ್ಷೇತ್ರವೊಂದರ ಜನ ಪ್ರತಿನಿಧಿ ಯಾಗಿದ್ದಾರೆ. ಹೀಗಾಗಿ ಆಧಾರ ರಹಿತವಾದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.