Advertisement

ಪುಟ್ಟರಂಗ ಶೆಟ್ಟಿ ರಾಜೀನಾಮೆಗೆ ಬಿಜೆಪಿ ಆಗ್ರಹ

05:27 AM Jan 07, 2019 | Team Udayavani |

ಕಲಬುರಗಿ: ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಆಪ್ತ ಸಿಬ್ಬಂದಿ ಬಳಿ 25.76 ಲಕ್ಷ ರೂ. ನಗದು ಪತ್ತೆಯಾಗಿರುವುದರಿಂದ ಅಧಿಕಾರದಲ್ಲಿ ಮುಂದುವರಿಯದೇ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಹಾಗೂ ರಾಜ್ಯದಲ್ಲಿ ತೈಲ ಬೆಲೆ ತೆರಿಗೆ ಹೆಚ್ಚಳ ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ರವಿವಾರ ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಕೂಡಲೇ ವಿಧಾನಸೌಧ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರು. ಮುಖ್ಯವಾಗಿ ಮಾಧ್ಯಮ ಪ್ರತಿನಿಧಿಗಳನ್ನು ಗುರಿಯಾಗಿಸಿಟ್ಟುಕೊಂಡೇ ಪ್ರವೇಶಕ್ಕೆ ಕೊಕ್ಕೆ ಹಾಕಲಾಗಿತ್ತು. ಹಣ ಸಾಗಾಣಿಕೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದಲೇ ನಿರ್ಬಂಧ ಹಾಕಲಾಗಿತ್ತೇ ಎಂದು ಪ್ರಶ್ನಿಸಿದ ಬಿಜೆಪಿ ಮುಖಂಡರು, ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದಿದ್ದರೆ ಸಿಎಂ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ವಿಧಾನಸೌಧದಲ್ಲಿ ಲಕ್ಷಾಂತರ ವ್ಯವಹಾರ ನಡೆಯುತ್ತಿದೆ ಎಂದರೆ ಸಮ್ಮಿಶ್ರ ಸರ್ಕಾರದಲ್ಲಿ ಭ್ರಷ್ಟಾಚಾರ ಹೇಗೆ ಹಬ್ಬಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಪುಷ್ಟಿ ಎನ್ನುವಂತೆ ಕೆಪಿಸಿಸಿ ಅಧ್ಯಕ್ಷರು ಮಾತನಾಡಿರುವುದು ನಿಜಕ್ಕೂ ನಾಚಿಕೆಪಡುವಂತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಗೌಡ ಪಾಟೀಲ್‌ ನರಿಬೋಳ, ಶಾಸಕ ದತ್ತಾತ್ರೇಯ ಪಾಟೀಲ, ನಾಮದೇವ ರಾಠೊಡ, ಸಿದ್ರಾಮಪ್ಪ ಮಾಲಿಬಿರಾದಾರ, ಲಿಂಗರಾಜ ಬಿರಾದಾರ, ಸುಭಾಷ ರಾಠೊಡ, ಬಸವರಾಜ ಇಂಗಿನ್‌, ದಯಾಘನ್‌ ಧಾರವಾಡಕರ್‌, ಶಿವಯೋಗಿ ನಾಗನಹಳ್ಳಿ, ಡಾ| ಇಂದಿರಾ ಶಕ್ತಿ, ಸುಭಾಷ ಬಿರಾದಾರ, ಜಾಧವ್‌ ಮುಂತಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next