ಹುಬ್ಬಳ್ಳಿ: ವಿಧಾನಪರಿಷತ್ತು ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ದೊರೆಯಲಿದ್ದು, ಅವಿಭಜಿತ ಧಾರವಾಡ ಜಿಲ್ಲೆಯಿಂದ ಪಕ್ಷದ ಅಭ್ಯರ್ಥಿ ಪ್ರದೀಪ ಶೆಟ್ಟರ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು.
ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಪ್ರಾರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಗುಂಪಿನ ನಡುವೆ ಪೈಪೋಟಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿಕೊಳ್ಳುವ ಶಕ್ತಿ ಇಲ್ಲವಾಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮುಕ್ತ ಭಾರತ ಆಗುವುದು ಖಚಿತ ಎಂದರು.
ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾವಕಾರ ಮಾತನಾಡಿದರು. ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣಾ ಕೊರವಿ, ಬೀರಪ್ಪ ಖಂಡೇಕಾರ, ರೂಪಾ ಶೆಟ್ಟಿ, ಉಮಾ ಮುಕುಂದ, ಎಂ.ವೈ. ನರಗುಂದ, ಮೀನಾಕ್ಷಿ ವಂಟಮೂರಿ, ಸೀಮಾ ಮೊಗಳಿಶೆಟ್ಟರ, ಮುಖಂಡರಾದ ವಿರೂಪಾಕ್ಷ ರಾಯನಗೌಡ್ರ, ಗೋಪಾಲ ಬದ್ದಿ, ಮಹೇಂದ್ರ ಕೌತಾಳ, ಸೀಮಾ ಲದವಾ, ಭಾರತಿ ಟಪಾಲ, ರವಿ ನಾಯ್ಕ, ಅಕ್ಕಮ್ಮ ಹೆಗಡೆ, ವಸಂತ ನಾಡಜೋಶಿ, ಸದಾಶಿವ ಚೌಶೆಟ್ಟಿ, ಮಹೇಶ ಬುರ್ಲಿ, ಅವಿನಾಶ ಹರಿವಾಣ, ರಾಮನಾಥ ಶೆಣೈ ಇನ್ನಿತರರು ಪಾಲ್ಗೊಂಡಿದ್ದರು.