Advertisement
ಶನಿವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಮೂಲದ ರಮೇಶ್ ಕತ್ತಿ, ಪ್ರಭಾಕರ್ ಕೊರೆ ಹಾಗೂ ಕರಾವಳಿ ಮೂಲದ ಪ್ರಕಾಶ್ ಶೆಟ್ಟಿಯವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಮೂವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ನೀಡಲು ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.
Related Articles
Advertisement
ಸಚಿವರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್, ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಿಂಬಾವಳಿ, ಎನ್.ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮೊದಲಾದವರು ಕೋರ್ ಕಮಿಟಿ ಸಭೆಯಲ್ಲಿದ್ದರು.
ಮತ್ತಿಬ್ಬರ ಹೆಸರು ಸೇರ್ಪಡೆಈ ಮೂವರು ಅಭ್ಯರ್ಥಿಗಳ ಜತೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ನಿರ್ಮಲ್ ಕುಮಾರ್ ಸುರಾನಾ ಮತ್ತು ಡಾ| ಎಂ. ನಾಗರಾಜ ಅವರ ಹೆಸರನ್ನು ಸೇರಿ ಸ ಬೇಕು ಎಂಬ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಐವರ ಹೆಸರನ್ನು ಕೇಂದ್ರ ಚುನಾವಣ ಸಮಿತಿಗೆ ಸಲ್ಲಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸುರಾನಾ ಮತ್ತು ಡಾ| ಎಂ. ನಾಗರಾಜ ಅವರ ಹೆಸರನ್ನು ಸೇರಿಸಿ ಕಳುಹಿಸಬೇಕು ಎಂದು ಒತ್ತಡ ಬಂದ ಹಿನ್ನೆಲೆಯಲ್ಲಿ ಐವರ ಹೆಸರಿರುವ ಅಂತಿಮ ಪಟ್ಟಿಯನ್ನು ಕೇಂದ್ರ ಚು. ಸಮಿತಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆದರೆ ಪ್ರಕಾಶ್ ಶೆಟ್ಟಿ ಆಯ್ಕೆ ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.