Advertisement

Chikkodi: ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಿದ ಬಿಜೆಪಿ

03:15 PM Oct 16, 2023 | Team Udayavani |

ಚಿಕ್ಕೋಡಿ: ಕಾಂಗ್ರೆಸ್ ಸರಕಾರ ಆಡಳಿತ ಬಂದಾಗಿನಿಂದ ರೈತರಿಗೆ ಸಮರ್ಪಕ ವಿದ್ಯುತ್ ನೀಡುವಲ್ಲಿ ಸರಕಾರ ವಿಫಲವಾಗಿರುವುದನ್ನು ಖಂಡಿಸಿದ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

Advertisement

ಚಿಕ್ಕೋಡಿ ನಗರದ ಬಸವ ವೃತ್ತದಲ್ಲಿ ಸಂಕೇಶ್ವರ ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕೋಡಿ, ರಾಯಬಾಗ ಮತ್ತು ನಿಪ್ಪಾಣಿ ತಾಲೂಕಿನ ಸಾವಿರಾರು ರೈತರು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಎರಡು ಗಂಟೆಗಳ ಕಾಲ ಹೆದ್ದಾರಿ ಬಂದ್ ಮಾಡಿ 7 ಗಂಟೆ ಕಾಲ ವಿದ್ಯುತ್ ಕೊಡಬೇಕೆಂದು ಆಗ್ರಹಿಸಿದರು.

ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಗ್ಯಾರಂಟಿಗಳ ಲೋಕದಲ್ಲಿ ಮುಳುಗಿರುವ ಸರಕಾರ ಅನ್ನದಾತರಿಗೆ ಮೋಸ ಮಾಡಿತ್ತಿದೆ. ಕರೆಂಟ್ ಇಲ್ಲದೆ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬರಗಾಲದಿಂದ ತತ್ತರಿಸಿ ಹೋಗಿರುವ ರೈತರು ಮೊದಲೇ ಸಂಕಷ್ಟ ಎದುರಿಸುವ ಇಂತಹ ಕಠಿನ ಪರಿಸ್ಥಿತಿಯಲ್ಲಿ ವಿದ್ಯುತ್ ಸಮಸ್ಯೆ ರೈತರಿಗೆ ದೊಡ್ಡ ಹೊಡೆತ ನೀಡುತ್ತಿದೆ. ಸರಕಾರ ಎಚ್ಚೆತ್ತುಕೊಂಡು ಪ್ರತಿದಿನ 7 ಗಂಟೆ ವಿದ್ಯುತ್ ಕೊಡಬೇಕೆಂದು ಒತ್ತಾಯಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ರಾಜ್ಯದಲ್ಲಿ ಒಟ್ಟು 1130 ಮೆ. ವ್ಯಾಟ್ ವಿದ್ಯುತ್. 14 ಸಾವಿರ ಮೆ. ಬಳಕೆಯಾಗುತ್ತದೆ. ಆದರೂ ಕಾಂಗ್ರೆಸ್ ಸಮಪರ್ಕ ವಿದ್ಯುತ್ ಕೊಡುತ್ತಿಲ್ಲ ಎಂದು ಆಗ್ರಹಿಸಿದರು. ‌

Advertisement

ನದಿ ಮೂಲದಲ್ಲಿ ನೀರು ಇದ್ದರೂ ವಿದ್ಯುತ್ ಕೊರತೆಯನ್ನು ರೈತರು ಸಂಕಷ್ಟ ಪಡುತ್ತಿದ್ದಾರೆ. ರೈತರು ಬೆಳೆ ಉಳಿಸಿಕೊಳ್ಳಲು ಸಮಪರ್ಕ ವಿದ್ಯುತ್ ಕೊಡಬೇಕೆಂದು ಒತ್ತಾಯಿಸಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ರಾಜ್ಯದಲ್ಲಿ ಮಳೆ ಕೊರತೆಯಿಂದ ವಿದ್ಯುತ್ ಸಮಸ್ಯೆ ಆಗಿರಬಹುದು. ಆದರೆ ಬೇರೆ ರಾಜ್ಯದಿಂದ ವಿದ್ಯುತ್ ಖರೀದಿಸಿ ರೈತರಿಗೆ ಸಮರ್ಪಕ ವಿದ್ಯುತ್ ಕೊಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಾಸಕ ದುರ್ಯೋಧನ ಐಹೊಳೆ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಮಹೇಶ ಭಾತೆ, ಸುರೇಶ ಬೆಲ್ಲದ, ಅಶೋಕ ಹರಗಾಪೂರೆ, ಪ್ರಭು ಡಬ್ಬನ್ನವರ, ಎಂ.ಪಿ.ಪಾಟೀಲ, ಪವನ ಪಾಟೀಲ, ಸತೀಶ ಅಪ್ಪಾಜಿಗೋಳ, ಸಂಜು ಅರಗೆ, ರಮೇಶ ಕಾಳನ್ನವರ, ಸಂಜು ಪಾಟೀಲ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next