Advertisement

ಸುಪ್ರೀಂ ತೀರ್ಪಿನತ್ತ ಬಿಜೆಪಿ ಚಿತ್ತ

10:53 PM Nov 12, 2019 | Team Udayavani |

ಬೆಂಗಳೂರು: ಅನರ್ಹಗೊಂಡ ಶಾಸಕರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬುಧವಾರ ಸುಪ್ರೀಂ ಕೋರ್ಟ್‌ ನೀಡಲಿರುವ ತೀರ್ಪಿನತ್ತ ರಾಜ್ಯ ಬಿಜೆಪಿ ಚಿತ್ತ ನೆಟ್ಟಿದೆ. ತೀರ್ಪು ಆಧರಿಸಿ ಮುಂದಿನ ಕಾರ್ಯತಂತ್ರ ಹೆಣೆಯಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯನ್ನೂ ಬುಧವಾರ ಮಧ್ಯಾಹ್ನ ಕರೆಯಲಾಗಿದ್ದು, ಕುತೂಹಲ ಮೂಡಿಸಿದೆ.

Advertisement

ಸುಪ್ರೀಂಕೋರ್ಟ್‌ ಅವ ಕಾಶ ನೀಡಿದರೆ ಅನರ್ಹಗೊಂಡ ಶಾಸಕರಿಗೆ ಉಪಚುನಾವಣೆಯಲ್ಲಿ ಟಿಕೆಟ್‌ ನೀಡಲು ರಾಜ್ಯ ಬಿಜೆಪಿ ನಾಯಕರು ಚಿಂತಿಸಿದ್ದಾರೆ. ಇದಕ್ಕೆ ಬೇಸರಗೊಂಡು ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದರೆ, ಮಾಜಿ ಶಾಸಕ ರಾಜು ಕಾಗೆ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ಇಷ್ಟಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳದ ಬಿಜೆಪಿಯು ಸುಪ್ರೀಂ ತೀರ್ಪಿನ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ.

ಕೋರ್‌ ಕಮಿಟಿ ಸಭೆ: ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ, ಸರ್ಕಾರವನ್ನು ಸುಭದ್ರಗೊಳಿಸಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಸುಪ್ರೀಂ ಕೋರ್ಟ್‌ ನೀಡುವ ತೀರ್ಪು ಮಹತ್ವದ್ದಾಗಿದೆ. ಆ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪಾಲ್ಗೊಳ್ಳಲಿದ್ದು, ತೀರ್ಪು ಆಧರಿಸಿ ಕಾರ್ಯತಂತ್ರ ರೂಪಿಸಲಿದ್ದಾರೆ.

ತೀರ್ಪು ಪರಿಶೀಲಿಸಿ ನಿರ್ಧಾರ: ಶರತ್‌ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದು, ರಾಜು ಕಾಗೆ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದರೂ ಪಕ್ಷ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌, ಇದು ಪಕ್ಷದ ರಾಜ್ಯಾಧ್ಯಕ್ಷರ ಗಮನದಲ್ಲಿದೆ. ಸುಪ್ರೀಂ ಕೋರ್ಟ್‌ ತೀರ್ಪು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next