ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ, ಬಿಜೆಪಿ ಮುಖಂಡ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಬುಧವಾರ (ಜುಲೈ 06) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಬಿಜೆಪಿಯಿಂದ ನ್ಯಾಯಾಂಗದ ಮೇಲೆ ಆಕ್ರಮಣ ನಡೆಯುತ್ತಿದೆ: ಅಭಿಷೇಕ್ ಮನು ಸಿಂಘ್ವಿ
ಎನ್ ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಖ್ವಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಊಹಾಪೋಹದ ನಡುವೆ ನಖ್ವಿ ರಾಜೀನಾಮೆ ನೀಡಿದ್ದಾರೆ. ನಖ್ವಿ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ನಾಳೆ (ಜುಲೈ 07) ಮುಕ್ತಾಯಗೊಳ್ಳಲಿದೆ.
ಇತ್ತೀಚೆಗೆ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ನಖ್ವಿ ಅವರ ಹೆಸರನ್ನು ಬಿಜೆಪಿ ಹೆಸರಿಸಿಲ್ಲವಾಗಿತ್ತು. ಇಂದು ಬೆಳಗ್ಗೆ ನಖ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು.
ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿದ್ದ ನಖ್ವಿ ಮತ್ತು ರಾಜನಾಥ್ ಸಿಂಗ್ ಮಾತ್ರ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ.