Advertisement

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿಯಾಗಿಲ್ಲ: ಕೋರೆ

11:30 PM May 08, 2019 | Team Udayavani |

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಇನ್ನೂ ಖಾಲಿಯಾಗಿಲ್ಲ. ಹುದ್ದೆ ತೆರವಾಗುವ ಮೊದಲೇ ತಾವೂ ಆಕಾಂಕ್ಷಿಗಳು ಎಂದು ಹೇಳಿಕೊಳ್ಳುವುದು ಸರಿಯಲ್ಲ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬುಧವಾರ ನಗರದ ಡಾಲರ್ ಕಾಲೋನಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತ್ರವಲ್ಲದೆ ಹಲವು ಆಕಾಂಕ್ಷಿಗಳಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರನ್ನು ಬಿಜೆಪಿಗೆ ಆಹ್ವಾನಿಸುವುದಾಗಿ ಬಸವರಾಜ ಪಾಟೀಲ್‌ ಯತ್ನಾಳ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಭಾಕರ ಕೋರೆ, ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ, ಅವರು ಬಿಜೆಪಿಗೆ ಬಂದು ಮಾಡುವುದೇನಿದೆ. ಯಡಿಯೂರಪ್ಪ ಅವರು ಆರೋಗ್ಯವಾಗಿಯೇ ಇದ್ದಾರೆ.

ಎಂ.ಬಿ.ಪಾಟೀಲ್‌ ಅವರು ಬಿಜೆಪಿಗೆ ಬಂದರೂ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಗುವುದಿಲ್ಲ ಎಂದು ಹೇಳಿದರು. ಇನ್ನೊಂದೆಡೆ, ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು. ಹಾಗೆಯೇ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹಲವು ಕಾಂಗ್ರೆಸ್‌ ನಾಯಕರು ಹೇಳುತ್ತಿರುವ ಬಗ್ಗೆಯೂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next