Advertisement
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದು ಹೇಳಿದರು.
Related Articles
Advertisement
ಸದಸ್ಯತ್ವ ಅಭಿಯಾನಕ್ಕಾಗಿ ರಘುನಂದನ್ ರಾಮಣ್ಣ ನೇತೃತ್ವದಲ್ಲಿ ತಾಂತ್ರಿಕ ಸಮಿತಿ, ಆರ್.ವಿ. ವೆಂಕಟೇಶ್ ನೇತೃತ್ವದಲ್ಲಿ ರಾಜಕೀಯ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷನಾಗಿ ನಾನೇ ಸದಸ್ಯತ್ವ ನೋಂದಣಿ ಮಾಡುತ್ತಿದ್ದೇನೆ. ಇಂದು ಬೆಳಗ್ಗೆ ನಾನು ರೈಲಿನಿಂದ ಇಳಿಯುತ್ತಿದ್ದಂತೆ 11 ಜನರ ಸದಸ್ಯತ್ವ ನೋಂದಣಿ ಮಾಡಿದ್ದೇನೆ ಎಂದು ತಿಳಿಸಿದರು.
ಕಳೆದ ತಿಂಗಳು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದಾಗ ಅವರು ಸದಸ್ಯತ್ವ ನೋಂದಣಿ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಪರಿಣಾಮವಾಗಿ ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಜಿಲ್ಲಾವಾರು ಸಭೆಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ಪ್ರತಿ ಬೂತ್‌ಗೆ ಇಬ್ಬರು ನೋಂದಣಿದಾರರನ್ನು ನೇಮಿಸಲಾಗುತ್ತಿದ್ದು, ಇಂದು ಮುಖ್ಯ ನೋಂದಣಿದಾರರು ಹಾಗೂ ಉಸ್ತುವಾರಿ ವಹಿಸಿಕೊಂಡಿರುವ ಬೆಂಗಳೂರು, ಮೂರು ವಿಭಾಗ, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರದ ಏಳು ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ಬ್ಲಾಕ್, ವಾರ್ಡ್, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಸಭೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ಇಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲಾಗುತ್ತಿತ್ತು. ಹೀಗಾಗಿ ಈ ಬಾರಿಯೂ ಹೆಚ್ಚಿನ ಸದಸ್ಯರನ್ನು ಮಾಡಬೇಕು. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದು, ಒಂದೂವರೆ ವರ್ಷದಲ್ಲಿ ಸಾರ್ವತ್ರಿಕ ಚುನಾವಣೆ ಬರಲಿದೆ. ಈ ಸಮಯದಲ್ಲಿ ನಾವು ಮನೆ ಮನೆಗಳಿಗೆ ಹೋಗಲು ಇದೊಂದು ಅವಕಾಶ ಎಂದು ಹೇಳಿದರು. ಮಹಾದಾಯಿ ವಿಚಾರದಲ್ಲಿ ಗೋವಾದವರು ಏನಾದರೂ ಮಾಡಿಕೊಳ್ಳಲಿ ನಮಗೆ ರಾಜ್ಯದ ಹಿತ ಮುಖ್ಯ. ನಮಗೆ ಗೋವಾದಿಂದ ಅನ್ಯಾಯವಾಗುತ್ತಿದೆ. ಅದರ ವಿರುದ್ಧ ನಮ್ಮ ಧ್ವನಿ ಇರುತ್ತದೆ. ರಾಜ್ಯದ ಪರ ನಮ್ಮ ತತ್ವ ಸಿದ್ಧಾಂತ ಇರುತ್ತದೆ. ಮಹಾದಾಯಿ ವಿಚಾರದಲ್ಲಿ ಪಾದಯಾತ್ರೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ