Advertisement

ಬಿಜೆಪಿಯವರು ರಿಯಲ್‌ ಗೂಂಡಾಗಳು: ಸಿದ್ದರಾಮಯ್ಯ

07:21 AM Jul 11, 2019 | Team Udayavani |

ಬೆಂಗಳೂರು: ಬಿಜೆಪಿಯವರು ರಿಯಲ್‌ ಗೂಂಡಾಗಳು. ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Advertisement

ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್‌ ರಾಜೀನಾಮೆ ಸಲ್ಲಿಸಿದ ನಂತರ ಅವರ ಮನವೊಲಿಕೆ ನಡೆಸಿ, ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಾ.ಸುಧಾಕರ್‌ ಅವರು ನಮ್ಮ ಪಕ್ಷದ ಶಾಸಕ. ಅವರು ರಾಜೀನಾಮೆ ನೀಡಿದರೆ, ಶಾಸಕಾಂಗ ಪಕ್ಷದ ನಾಯಕನಾಗಿ ಅವರ ಮನವೊಲಿಕೆ ಮಾಡುವುದು ನನ್ನ ಜವಾಬ್ದಾರಿ. ಅಲ್ಲಿ ಬಿಜೆಪಿಯವರಿಗೆ ಏನು ಕೆಲಸ ಇದೆ. ಅವರು ಬಂದು ಪ್ರತಿಭಟನೆ ಮಾಡುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ಬಿಜೆಪಿಯವರು ಇಡಿ, ಐಟಿ, ಸಿಬಿಐಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಮುಗಿಸಲು ಅವರು ಪ್ರಯತ್ನ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಮುಳುಗುವುದಿಲ್ಲ. ಬಿಜೆಪಿಯವರಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next