Advertisement
ಈ ಪ್ರವಾಸದ ಬಗ್ಗೆ ರೂಪು-ರೇಷೆ ರೂಪಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜೂ.27ರಂದು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಯಾರ್ಯಾರ ನೇತೃತ್ವದಲ್ಲಿ ತಂಡ ರಚಿಸಬೇಕೆಂಬುದು ಇತ್ಯರ್ಥವಾಗಲಿದೆ.
Related Articles
ಬಿಜೆಪಿ ಮೂಲಗಳ ಪ್ರಕಾರ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಯೋಜಿತ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಹಿರಿತನ ಹಾಗೂ ವಿಷಯವಾರು ಪರಿಣತಿ ಆಧಾರದ ಮೇಲೆ ಯಾರು, ಯಾವ ಚರ್ಚೆಯಲ್ಲಿ ಭಾಗವಹಿಸಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
Advertisement
ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್..ಅಶೋಕ, ಅರವಿಂದ ಬೆಲ್ಲದ್, ವಿ.ಸುನೀಲ್ ಕುಮಾರ್, ಬಸನಗೌಡ ಪಾಟೀಲ್ ಯತ್ನಾಳ್, ಅಭಯ್ ಪಾಟೀಲ್ , ಬಿ.ವೈ.ವಿಜಯೇಂದ್ರ, ಡಾ. ಭರತ್ ಶೆಟ್ಟಿ, ಎಸ್.ಆರ್. ವಿಶ್ವನಾಥ್, ಡಾ. ಸಿ.ಎನ್. ಅಶ್ವತ್ಥನಾರಾಯಣ ಮೊದಲಾದವರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.
ಪರಿಷತ್ತಿನಲ್ಲಿ ಸಿ.ಟಿ.ರವಿ, ರವಿಕುಮಾರ್, ಛಲವಾದಿ ನಾರಾಯಣಸ್ವಾಮಿಗೆ ಹೊಣೆ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಈ ಬಾರಿ ಸದನದಲ್ಲಿ ಸಂಘಟಿತ ಹೋರಾಟ ನಡೆಸುವುದಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.
ಜುಲೈ 4ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಜು.4ರಂದು ಬಿಜೆಪಿ ಶಾಸಕರ ಸಭೆ ಕರೆಯಲಾಗಿದ್ದು, ಈ ತುರ್ತು ಕರೆಯ ಉದ್ದೇಶವನ್ನು ಗೌಪ್ಯವಾಗಿ ಇಡಲಾಗಿದೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಬಿಜೆಪಿ ಮುಖ್ಯ ಸಚೇತಕರ ಕಚೇರಿಯಿಂದ ಎಲ್ಲ ಶಾಸಕರಿಗೆ ಸಂದೇಶ ರವಾನೆ ಮಾಡಲಾಗಿದೆ. ಮಹತ್ವದ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ ಎಂದು ಈ ಮೊದಲು ಸೂಚಿಸಲಾಗಿತ್ತು. ಆದರೆ ಈಗ ಬ್ರೇಕ್ ಪಾಸ್ಟ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಅಧಿವೇಶನ ಸಂದರ್ಭದಲ್ಲಿ ಈ ಸಭೆ ಕರೆಯಲಾಗುತ್ತದೆ. ಆದರೆ ಅಧಿವೇಶನಕ್ಕೆ ದಿನಾಂಕ ನಿಗದಿಯಾಗುವುದಕ್ಕೆ ಮುನ್ನವೇ ಸಭೆ ಕರೆದಿರುವುದು ಕುತೂಹಲ ಸೃಷ್ಟಿಸಿದೆ.