Advertisement
ನಗರದ ಬಿವಿವಿ ಸಂಘದ ನೂತನ ಸಭಾ ಭವನದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರದ ಪೂರ್ವಭಾವಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಪದವೀಧರರು ಹಾಗೂ ಶಿಕ್ಷಕರು ಮತ ಚಲಾಯಿಸುವಾಗ ಜಾಗೃತಿಯಿಂದ ಮತ ಹಾಕಬೇಕು. ಗ್ರಾಮೀಣ ಮತ್ತು ನಗರ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಎಲ್ಲೆಲ್ಲಿ ಬೂತ್‌ಗಳನ್ನು ಮಾಡಿರುತ್ತಾರೆ ಅಲ್ಲಿಗೆ ಮತದಾರರನ್ನು ಕರೆದುಕೊಂಡು ಹೋಗಿ ಮತ ಹಾಕಲು ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳೇ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರತಿ ಕಾರ್ಯಕರ್ತರು ಪರಿಶ್ರಮ ಹಾಕಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಇರುವ ಮತದಾರನ್ನು ಪಕ್ಷದ ಕಾರ್ಯಕರ್ತರು ಭೇಟಿಯಾಗಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಬೇಕು ಎಂದು ಕೋರಿದರು.
ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಅರುಣ್ ಶಹಾಪುರ, ಪದವೀಧರರ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಹಣಮಂತ ನಿರಾಣಿಯವರು ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಪರಿಷತ್‌ನಲ್ಲಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಹೀಗಾಗಿ ಅವರ ಗೆಲುವು ನಿಶ್ಚಿತ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಬಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಬಿಟಿಡಿಎ ಮಾಜಿ ಸಭಾಪತಿ ಜಿ.ಎನ್.ಪಾಟೀಲ, ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಬಾಗಲಕೋಟೆ ಕ್ಷೇತ್ರದ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ಮುದೇನೂರ, ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ಸಂಗಣ್ಣ ಕಲಾದಗಿ, ನಗರ ಮಂಡಲ ಮಾಧ್ಯಮ ಸಂಚಾಲಕ ರಾಜು ಗಾಣಿಗೇರ ಉಪಸ್ಥಿತರಿದ್ದರು.