Advertisement

ಬಳ್ಳಾರಿ-ಶಿವಮೊಗ್ಗದಲ್ಲಿ ಬಿಜೆಪಿಗೆ ಗೆಲುವು: ಶ್ರೀರಾಮುಲು

06:10 AM Oct 21, 2018 | Team Udayavani |

ಮರಿಯಮ್ಮನಹಳ್ಳಿ (ಬಳ್ಳಾರಿ): ರಾಜ್ಯದಲ್ಲಿ ನಡೆಯುವ 3 ಲೋಕಸಭೆ ಮತ್ತು ಎರಡು ವಿಧಾನಸಭಾ ಉಪ ಚುನಾವಣೆಯಲ್ಲಿ ಬಳ್ಳಾರಿ ಮತ್ತು ಶಿವಮೊಗ್ಗ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ತಿಳಿಸಿದರು. 

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಸಮಬಲದ ಹೋರಾಟ ನಡೆಯಲಿದೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಇನ್ನು ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಅಸಮಾಧಾನವಿದ್ದು, ಇದರ ಲಾಭ ಬಿಜೆಪಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next